ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022
ಶಿವಮೊಗ್ಗದ ತುಂಗಾ ನದಿ ಹೊಸ ಸೇತುವೆ ಮೇಲಿನ ಗುಂಡಿಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ. ಸೇತುವೆ ಮೇಲಿನ ಗುಂಡಿಗಳಿಗೆ ತೇಪೆ ಹಾಕಲಾಗಿದೆ. ಸದ್ಯ ವಾಹನ ಸವಾರರು ನಿರ್ಭೀತಿಯಿಂದ ಸಂಚರಿಸಬಹುದಾಗಿದೆ.
ತುಂಗಾ ನದಿ ಹೊಸ ಸೇತುವೆ ಮೇಲೆ ದೊಡ್ಡ ಗಾತ್ರದ ಗುಂಡಿಗಳಿದ್ದವು. ಇದು ವಾಹನ ಸವಾರರಿಗೆ ತೀವ್ರ ಸಂಕಷ್ಟ ತಂದೊಡ್ಡಿತ್ತು. ಗುಂಡಿಗಳಿಂದಾಗಿಯೇ ತುಂಗಾ ನದಿ ಹೊಸ ಸೇತುವೆ ಮೇಲೆ ಅಪಘಾತ ಸಂಭವಿಸುತ್ತಿತ್ತು.
ಶಿವಮೊಗ್ಗ ಲೈವ್’ನಲ್ಲಿ ವರದಿ ಪ್ರಕಟ
ತುಂಗಾ ನದಿ ಹೊಸ ಸೇತುವೆ ಮೇಲಿನ ದೊಡ್ಡ ಗುಂಡಿಗಳ ಕುರಿತು ಶಿವಮೊಗ್ಗ ಲೈವ್.ಕಾಂ ವರದಿಗಳನ್ನು ಪ್ರಕಟಿಸಿತ್ತು. ಈ ವರದಿ ಬೆನ್ನಿಗೆ ಅಧಿಕಾರಿಗಳು ಗುಂಡಿ ಮುಚ್ಚುವ ಕುರಿತು ತಿರ್ಮಾನ ಕೈಗೊಂಡಿದ್ದರು. ಶಿವಮೊಗ್ಗ ಲೈವ್’ನಲ್ಲಿ ಪ್ರಕಟವಾದ ವರದಿ ಇಲ್ಲಿದೆ » ತುಂಗಾ ನದಿ ಸೇತುವೆ ಮೇಲೆ ಇನ್ನೆಷ್ಟು ಜನರ ಬಲಿಗಾಗಿ ಕಾಯುತ್ತಿದ್ದಾರೆ ಅಧಿಕಾರಿಗಳು? | ದೂರು ದುಮ್ಮಾನ
ಸಂಸದರ ಭೇಟಿ ಮೊದಲು ಗುಂಡಿ ಬಂದ್
ಇವತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ವಿವಿಧ ರೈಲ್ವೆ ಮೇಲ್ಸೇತುವೆ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿದ್ಯಾನಗರದಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನೂ ಪರಿಶೀಲನೆ ನಡೆಸಿದರು. ಈ ಸಂದರ್ಭ ಸಂಸದರು ಹೊಸ ಸೇತುವೆ ಮೇಲೆ ಸಂಚರಿಸುವ ಸಾದ್ಯತೆ ಕುರಿತು ಮಾಹಿತಿ ಲಭಿಸುತ್ತಿದ್ದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಗುಂಡಿಗಳಿಗೆ ಡಾಂಬಾರು ತುಂಬಿದ್ದಾರೆ. ಭಾನುವಾರ ಮಧ್ಯಾಹ್ನದ ವೇಳೆಗೆ ಗುಂಡಿ ಮುಚ್ಚಿಸಿದ್ದಾರೆ.
ಇದನ್ನೂ ಓದಿ | ನಾಲ್ಕು ರೈಲ್ವೆ ಮೇಲ್ಸೇತುವೆ, ಶಿವಮೊಗ್ಗ ಸಂಸದರಿಂದ ಕಾಮಗಾರಿ ಪರಿಶೀಲನೆ, ಎಲ್ಲೆಲ್ಲಿ ಎಷ್ಟಾಗಿದೆ ಕೆಲಸ?
ಸದ್ಯ ತುಂಗಾ ನದಿ ಹೊಸ ಸೇತುವೆ ಮೇಲೆ ವಾಹನ ಸವಾರರು ನಿರಾಳವಾಗಿ ಸಂಚರಿಸಬಹುದಾಗಿದೆ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





