ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021
ಹಾನಗಲ್’ಗೆ ವೀಕ್ಷಕರಾಗಿ ಸುಂದರೇಶ್
ಹಾನಗಲ್ ವಿಧಾನಸಭೆ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ಒಂಭತ್ತು ವೀಕ್ಷಕರನ್ನು ನೇಮಿಸಿದೆ. ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ. ಈ ಸಂಬಂಧ ಕೆಪಿಸಿಸಿ ವತಿಯಿಂದ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಸರ್ಕಾರಿ ನೌಕರರ ಸಂಘದ ಸಭೆ
ಸರ್ಕಾರಿ ನೌಕರರ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಅಕ್ಟೋಬರ್ 31ರಂದು ಸಂಜೆ 5.30ಕ್ಕೆ ಡಿಸಿ ಕಾಂಪೌಂಡ್’ನಲ್ಲಿರುವ ಸರ್ಕಾರಿ ನೌಕರರ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಅಕ್ಟೋಬರ್ 8ರಂದು ಕರೆಂಟ್ ಇರಲ್ಲ
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್’ನಲ್ಲಿ ರಿಪೇರಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಂದು ಬೆಳಗ್ಗೆ 11.30ರಿಂದ ಸಂಜೆ 4.30ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶಿವಮೊಗ್ಗ ನಗರದ ಎಲ್.ಐ.ಸಿ ಆಫೀಸ್, ತೆರಿಗೆ ಕಛೇರಿ, ಗೋಪಾಳ ಮುಖ್ಯ ರಸ್ತೆ, ಮೋರ್ ಅಕ್ಕ ಪಕ್ಕ, ಗೋಪಾಳ ಎ, ಬಿ, ಸಿ, ಡಿ, ಇ ಮತ್ತು ಎಫ್ ಬ್ಲಾಕ್, ಅಲ್ಹರೀಮ್ ಲೇಔಟ್, ಕೆಎಚ್ಬಿ ಕಾಲೋನಿ, ಪ್ರೆಸ್ ಕಾಲೋನಿ, 100 ಅಡಿ ರಸ್ತೆ ಪೆಟ್ರೋಲ್ ಬಂಕ್, ವಾಣೀಜ್ಯ ತೆರಿಗೆ ಕಛೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಶಿವಮೊಗ್ಗ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200