ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಜನವರಿ 2022
ಶಿವಮೊಗ್ಗ ತಾಲೂಕಿನ ವಿವಿಧೆಡೆ ಜನವರಿ 20ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯಲಿದೆ. ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಹಳ್ಳಿಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬೆಕ್ಕಿನಕಲ್ಮಠ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಿಟಿಯಲ್ಲಿ ವಿದ್ಯುತ್ ವ್ಯತ್ಯಯ
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ರಸ್ತೆ ಕಾಮಗಾರಿ ನಡೆಯಲಿದೆ. ಈ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಪಿ&ಟಿ ಕಾಲೋನಿ, ಕನಕನಗರ, ಸೂರ್ಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422