ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ವಿವಿಧೆಡೆ ಮೆಸ್ಕಾಂ ವತಿಯಿಂದ ಕಾಮಗಾರಿಗಳು ನಡೆಯುತ್ತಿರುವುದರಿಂದ ಶಿವಮೊಗ್ಗ ನಗರ ಮತ್ತು ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗುವ ಸಂಭವವಿದೆ. ಆಗಸ್ಟ್ 4 ಮತ್ತು 5ರಂದು ಪ್ರತ್ಯೇಕವಾಗಿ ವಿದ್ಯುತ್ ವ್ಯತ್ಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಂತೆಕಡೂರು, ಉಂಬ್ಳೆಬೈಲು ಸುತ್ತಮುತ್ತ
ಸಂತೇಕಡೂರು ವಿವಿ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಅದ್ದರಿಂದ ಆಗಸ್ಟ್ 4ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಭಂಡಾರಿಕ್ಯಾಂಪ್, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈದೊಟ್ಲು, ಕಾಕನಹಸೂಡಿ, ಲಿಂಗಾಪುರ, ಸಿದ್ದಮ್ಮಾಜಿ ಹೊಸೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಸಂಭವವಿದೆ.
ಪುರಲೆ ಸುತ್ತಮುತ್ತ ಕರೆಂಟ್ ಇರಲ್ಲ
ಪುರಲೆ ಫೀಡರ್-3 ಮತ್ತು ಜಾವಳ್ಳಿ ಫೀಡರ್ -08 ರಲ್ಲಿ 11 ಕೆ.ವಿ. ಮಾರ್ಗಮುಕ್ತತೆ ನೀಡಲಾಗುತ್ತಿದೆ. ಹಾಗಾಗಿ ಆಗಸ್ಟ್ 4ರಂದು ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ.
ಗುರುಪುರು, ಪುರಲೆ, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ಮಲವಗೊಪ್ಪ ಸುತ್ತಮುತ್ತ ಇರಲ್ಲ ವಿದ್ಯುತ್
ಮಲವಗೊಪ್ಪ ಫೀಡರ್ -5 ರಲ್ಲಿ 11 ಕೆ.ವಿ. ಮಾರ್ಗಮುಕ್ತತೆ ನೀಡಲಾಗುತ್ತಿದೆ. ಹಾಗಾಗಿ ಆಗಸ್ಟ್ 5ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422