ಶಿವಮೊಗ್ಗ ಸಿಟಿಯ ವಿವಿಧೆಡೆ ಆಗಸ್ಟ್‌ 22ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ತುರ್ತು ಕಾಮಗಾರಿ ಮತ್ತು ಕಂಬ ತೆರವು ಮಾಡಲಾಗುತ್ತಿದೆ. ಆದ್ದರಿಂದ ಆಗಸ್ಟ್ 22 ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಕರೆಂಟ್‌ ಇರಲ್ಲ

ಬಾಪೂಜಿನಗರ, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಟಿಜಿಎನ್ ಲೇಔಟ್ ಹಾಗೂ ಟ್ಯಾಂಕ್ ಮೊಹಲ್ಲಾ, ಸೋಮಯ್ಯ ಲೇಔಟ್, ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

Power Cut

ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ಕರೆಂಟ್‌ ಇರಲ್ಲ

ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3 ವ್ಯಾಪ್ತಿಯಲ್ಲಿಯೂ ತುರ್ತು ಕಾಮಗಾರಿ ನಡೆಸಲಾಗುತ್ತಿದೆ. ಹಾಗಾಗಿ ಜಡ್ಜ್ ಕ್ವಾರ್ಟರ್ಸ್‌, ಎಸ್.ವಿ.ಬಡಾವಣೆ ಸಿ ಬ್ಲಾಕ್ ಹಾಗೂ ವೃದ್ಧಾಶ್ರಮ ಸುತ್ತಮುತ್ತ ವಿದ್ಯುತ್ ಸ್ಥಗಿತಗೊಳ್ಳಲಿದೆ. ಡಾಕ್ಟ್ರರ್ಸ್ ಲೇಔಟ್, ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.