ಶಿವಮೊಗ್ಗ ನಗರದ ವಿವಿಧೆಡೆ ನಾಳೆಯಿಂದ ಎರಡು ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

 ಶಿವಮೊಗ್ಗ  LIVE 

ಶಿವಮೊಗ್ಗ: ನಗರ ಉಪವಿಭಾಗ-1 ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಜನವರಿ 3 ಮತ್ತು 4 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗ ರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸಲು ನಿರ್ಧಾರ, ಯಾವಾಗ? ಎಷ್ಟು ದಿನ? ಇಲ್ಲಿದೆ ಡಿಟೇಲ್ಸ್

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment