ಶಿವಮೊಗ್ಗ ಲೈವ್
ಶಿವಮೊಗ್ಗ: ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿಸೆಂಬರ್ 24ರ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ, ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಜನತಾ ಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿ ಗ್ರಾಮ, ಹೊನ್ನವಿಲೆ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ. ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಕುಟುಂಬದವರೆಲ್ಲ ಮಲಗಿದ್ದಾಗಲೇ ಮನೆಯಲ್ಲಿ ಕಳ್ಳತನ, ಲಕ್ಷ ಲಕ್ಷದ ಚಿನ್ನಾಭರಣ, ಹಣ ನಾಪತ್ತೆ, ಹೇಗಾಯ್ತು ಘಟನೆ?
