ಶಿವಮೊಗ್ಗ ಲೈವ್.ಕಾಂ | SHIMOGA NEWS | 03 FEBRUARY 2021
ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ವಿವಿಧ ಕಾಮಗಾರಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಫೆಬ್ರವರಿ 4ರಂದು ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಪ್ರಾಜೆಕ್ಟ್ 1
ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕೆಯ ಸ್ಮಾರ್ಟ್ಸಿಟಿ ಯೋಜನೆಯ ಪೂರಕ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಪಿಯರ್ ಲೈಟ್ ಕೈಗಾರಿಕೆ, ಎನ್.ಟಿ.ರಸ್ತೆ, ಬಿ.ಹೆಚ್.ರಸ್ತೆ, ಟೆಂಪೋಸ್ಟ್ಯಾಂಡ್ ಡೌನ್, ಜೆ.ಸಿ.ನಗರ, ಮಿಳ್ಳಘಟ್ಟ, ಮಾರ್ನಮಿಬೈಲು, ಮಂಡ್ಲಿ ವೃತ್ತ, ಇಲಿಯಾಸ್ನಗರ 8ನೇ ಅಡ್ಡರಸ್ತೆಯಿಂದ 13ನೇ ಅಡ್ಡ ರಸ್ತೆಯವರೆಗೆ, ಆರ್.ಎಂ.ಎಲ್.ನಗರದ ಮೊದಲನೇ ಮತ್ತು ಎರಡನೇಯ ಹಂತ, ಮಂಜುನಾಥ ಬಡಾವಣೆ, ಟಿಪ್ಪುನಗರ ಎಡಭಾಗ, ಆನಂದರಾವ್ ಬಡಾವಣೆ, ಮಿಳ್ಳಘಟ್ಟ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಪ್ರಾಜೆಕ್ಟ್ 2
ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿವಿಧೆಡೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆಯುರ್ವೇದ ಕಾಲೇಜ್, ನರ್ಸ್ ಕ್ವಾಟ್ರಸ್, ಆಯನೂರು ಗೇಟ್, ಪಟೇಲ್ ಸಾಮಿಲ್, ಸಾಗರ ರಸ್ತೆ, ಅಶೋಕ ಗ್ರಾಂಡ್, ಸತ್ಯಂ ಪೋರ್ ವಿಂಗ್ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200