ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS, 3 JANUARY 2024
ಶಿವಮೊಗ್ಗ : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಜ.4 ರಂದು ತಾಲೂಕಿನ ವಿವಿಧೆಡೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್.
ಮಲ್ನಾಡ್ ಆಸ್ಪತ್ರೆ, ಕೆಎಸ್‌ಆರ್‌ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಕೆಎಂಎಫ್ ಡೈರಿ ಹಾಗೂ ಸುತ್ತಮುತ್ತನಲ್ಲಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಇದನ್ನೂ ಓದಿ » ಹೆಚ್.ಟಿ.ಬಳಿಗಾರ್ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422