ಶಿವಮೊಗ್ಗ: ನಗರ ಉಪವಿಭಾಗ-1ರ ವ್ಯಾಪ್ತಿಯ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ನವೆಂಬರ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. (ಈ ಸುದ್ದಿಯನ್ನು ಇನ್ನು 54 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್ ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್. ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತದವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ ಹಾಗೂ ಸರ್.ಎಂ.ವಿ. ರಸ್ತೆ (ಮಹಾವೀರ್ ವೃತ್ತದಿಂದ ಗೋಪಿ ವೃತ್ತದವರೆಗೆ).

ಗಾಂಧಿ ಪಾರ್ಕ್, ಲೂರ್ದುನಗರ, ಕಾನ್ವೆಂಟ್ ರಸ್ತೆ, ಬಾಪುಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ, ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತಲಿನ ಪ್ರದೇಶಗಳು, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ ಹಾಗೂ ಆರ್.ಟಿ.ಓ. ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.