ಶಿವಮೊಗ್ಗ ಸಿಟಿಯ ವಿವಿಧೆಡೆ ಅಕ್ಟೋಬರ್‌ 15ರಂದು ಅರ್ಧ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ಉಷಾ ನರ್ಸಿಂಗ್ ಹೋಮ್ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಕಂಬ ತೆರವುಗೊಳಿಸುವ ಕಾಮಗಾರಿ ಹಿನ್ನೆಲೆ ಅಕ್ಟೋಬರ್ 15 ರಂದು ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮೆಸ್ಕಾಂ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲಿದೆ. ಆದ್ದರಿಂದ ಅಕ್ಟೋಬರ್ 15 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರವೀಂದ್ರ ನಗರ, ಗಾಂಧಿನಗರ, ಸವಳಂಗ ರಸ್ತೆ, ಹನುಮಂತ ನಗರ, ವಿನಾಯಕ ನಗರ, ವೆಂಕಟೇಶ ನಗರ, ಎಎನ್‌ಕೆ ರಸ್ತೆ ಹಾಗೂ ಉಷಾ ನರ್ಸಿಂಗ್ ಹೋಮ್ ಆಸ್ಪತ್ರೆ, ಚಂದ್ರಗಿರಿ ಆಸ್ಪತ್ರೆ, ಸುಶೋಧ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಲಾಗಿದೆ.  

POWER-CUT-UPDATE-NEWs ELECTRICITY