ಶಿವಮೊಗ್ಗ ಸಿಟಿಯ ವಿವಿಧೆಡೆ ಡಿಸೆಂಬರ್‌ 11ರಂದು ಅರ್ಧ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

 ಶಿವಮೊಗ್ಗ  LIVE 

ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದ 110 ಕೆವಿ ಲೈನ್‌ನಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿ.11 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 3ರವರೆಗೆ ನಗರ ಉಪವಿಭಾಗ 2 ರ ಘಟಕ 5 ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ (Power Outage) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಆರ್.ಎಂ.ಎಲ್. ನಗರ 1ನೇ ಮತ್ತು 2ನೇ ಹಂತ, ಎಲ್.ಎಲ್.ಆರ್. ರಸ್ತೆ, ಜೆ.ಸಿ.ನಗರ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್‌ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ ಸುತ್ತಮುತ್ತ, ಗೋಪಿಶೆಟ್ಟಿಕೊಪ್ಪ, ಜಿ.ಎಸ್. ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ.

ಇದನ್ನೂ ಓದಿ » ಮೆಗ್ಗಾನ್‌ ಆಸ್ಪತ್ರೆಯಿಂದ ಹೊರಬಂದ ಮೆಡಿಕಲ್‌ ವಿದ್ಯಾರ್ಥಿಗೆ ಕಾದಿತ್ತು ಶಾಕ್‌, ಆಗಿದ್ದೇನು?

ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮೇಲಿನ ತುಂಗಾನಗರ, ಸಲೀಮ್ ಫ್ಯಾಕ್ಟರಿ, ಹಳೇ ಗೋಪಿಶೆಟ್ಟಿಕೊಪ್ಪ, ಕಾಮತ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment