ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಬೆಳಿಗ್ಗೆಯಿಂದ ಸಂಜೆ ತನಕ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ನಗರ ಮೆಸ್ಕಾಂ ಉಪ ವಿಭಾಗ–3ರ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್–11 ರಲ್ಲಿ ನವೆಂಬರ್ 19 ರಂದು ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಅರವಿಂದನಗರ, ಸೂರ್ಯ ಲೇಔಟ್, ದೇವರಾಜ್ ಅರಸ್ ಬಡಾವಣೆ, ದೂರವಾಣಿ ಬಡಾವಣೆ, ಕನಕನಗರ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಲೇಔಟ್, ಮೈತ್ರಿ ಅಪಾರ್ಟ್‌ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

power cut mescom ELECTRICITY