ಶಿವಮೊಗ್ಗ ಸಿಟಿಯ ವಿವಿಧೆಡೆ ಆಗಸ್ಟ್‌ 1ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗ: ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆ ಆಗಸ್ಟ್ 1ರಂದು ಶಿವಮೊಗ್ಗ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಆಗಸ್ಟ್ 1ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಜಯನಗರ ಮುಖ್ಯರಸ್ತೆ ಮೆಟ್ರೋ ಆಸ್ಪತ್ರೆಯಿಂದ ಸರ್ವೋದಯ ಶಾಲೆಯವರೆಗೆ, ಜಯನಗರ 1ರಿಂದ 5ನೇ ಕ್ರಾಸ್‌ರವರೆಗೆ, ಸವಳಂಗ ರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Power Cut