ಶಿವಮೊಗ್ಗ: ನಗರದ ಸಾವರ್ಕರ್ ನಗರದಲ್ಲಿ ಅಪಾಯಕಾರಿ ಹಾಗೂ ಬೀಳುವ ಹಂತದಲ್ಲಿರುವ ಮರಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಸಾವರ್ಕರ್ ನಗರ, ಬಿ.ಹೆಚ್. ರಸ್ತೆ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ, ಗಾಂಧಿಬಜಾರ್, ಎಲೆರೇವಣ್ಣ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ. ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
