ಶಿವಮೊಗ್ಗ ಲೈವ್
ಶಿವಮೊಗ್ಗ: ಸೆಪ್ಟೆಂಬರ್ 26ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆವರಣದಲ್ಲಿ ಕಸಬಾ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ಎನ್. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕುಂದುಕೊರತೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಸಲ್ಲಿಸಬಹುದು. ಜೊತೆಗೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಸ್ಥಳದಲ್ಲೇ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಶಿವಮೊಗ್ಗ ತಾಲೂಕಿನ ತಹಶೀಲ್ದಾರರು ಕೋರಿದ್ದಾರೆ.
