ಪ್ರಸನ್ನ ಭಟ್ ಅಂತಿಮ ದರ್ಶನಕ್ಕೆ ಶಿವಮೊಗ್ಗ, ಹೊಸನಗರದಲ್ಲಿ ದೊಡ್ಡ ಸಂಖ್ಯೆಯ ಜನ, ಮುಖ್ಯ ರಸ್ತೆಯಲ್ಲಿ ಮೆರವಣಿಗೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 02 JANUARY 2023

ಶಿವಮೊಗ್ಗ / ಹೊಸನಗರ :  ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ಅವರ ಪಾರ್ಥಿವ ಶರೀರದ ಮೆರವಣಿಗೆ (procession) ಮಾಡಿ, ಬೈಕ್ ರಾಲಿ ನಡೆಸಲಾಯಿತು. ಹೊಸನಗರದ ಪಟ್ಟಣಕ್ಕೆ ಪಾರ್ಥಿವ ಶರೀರ ತಲುಪುತ್ತಿದ್ದಂತೆ ಅವರ ಸ್ನೇಹಿತರು, ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು.

ಹೊಸನಗರ ಮುಖ್ಯ ರಸ್ತೆಯಲ್ಲಿ ಮೆರವಣಿಗೆ (procession) ನಡೆಸಲಾಯಿತು. ಬಳಿಕ ನೆಹರು ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಪ್ರಸನ್ನ ಭಟ್ ಅವರ ಸ್ನೇಹಿತರು, ಬಿಜೆಪಿ, ಸಂಘ ಪರಿವಾರದ ಕಾರ್ಯಕರ್ತರು, ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಅಂತಿಮ ದರ್ಶನ ಪಡೆದರು.

ಶಿವಮೊಗ್ಗದಲ್ಲೂ ಅಂತಿಮ ದರ್ಶನ

ಶಿವಮೊಗ್ಗ ಬಿಜೆಪಿ ಕಚೇರಿ ಮುಂಭಾಗ ಪ್ರಸನ್ನ ಭಟ್ ಅವರಿಗೆ ಅಂತಿಮ ನಮನ ಸಲ್ಲಿಸಲಾಯಿತು. ರಾಮನಗರದಿಂದ ಆಂಬುಲೆನ್ಸ್ ಮೂಲಕ ಪಾರ್ಥಿವ ಶರೀರವನ್ನು ಶಿವಮೊಗ್ಗಕ್ಕೆ ತರಲಾಗಿತ್ತು. ಬಿಜೆಪಿ ಕಚೇರಿ ಬಳಿ ಸೇರಿದ್ದ ನೂರಾರು ಕಾರ್ಯಕರ್ತರು, ಸ್ನೇಹಿತರು ಅಂತಿಮ ದರ್ಶನ ಪಡೆದು, ಕಂಬನಿ ಮಿಡಿದರು.

prasanna Bhat procession

ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಎಸ್.ಎಸ್.ಜ್ಯೋತಿಪ್ರಕಾಶ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಹರಿಕೃಷ್ಣ, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಬಳ್ಳೆಕರೆ ಸಂತೋಷ್, ಸಂಸದ ಬಿ.ವೈ.ರಾಘವೇಂದ್ರ ಅವರ ಕಚೇರಿಯ ಎಲ್ಲಾ ಸಿಬ್ಬಂದಿ ಸೇರಿದಂತೆ ದೊಡ್ಡ ಸಂಖ್ಯೆಯ ಜನರು ಅಂತಿಮ ದರ್ಶನ ಪಡೆದರು.

ಇದನ್ನೂ ಓದಿ – ಸಂಸದ ರಾಘವೇಂದ್ರ ಅವರ ಫೋಟೊಗ್ರಾಫರ್ ಪ್ರಸನ್ನ ಭಟ್ ನಿಧನ, ಕೆರೆಯಲ್ಲಿ ಮೃತದೇಹ ಪತ್ತೆ

ರಾಮನಗರ ಜಿಲ್ಲೆಯ ಕನಕಪುರದ ಮಾವತ್ತೂರು ಕೆರೆಯಲ್ಲಿ ಮುಳುಗಿ ಪ್ರಸನ್ನ ಭಟ್ ಅವರು ಭಾನುವಾರ ಕೊನೆಯುಸಿರೆಳೆದಿದ್ದರು.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment