ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ನವೆಂಬರ್ 2021
ವಿಧಾನ ಪರಿಷತ್ ಚುನಾವಣೆಗೆ ಮೊದಲ ನಾಮಪತ್ರ ಸಲ್ಲಿಕೆಯಾಗಿದೆ. ಬಿ-ಫಾರಂ ಇಲ್ಲದೆಯೇ ಆರ್.ಪ್ರಸನ್ನಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಕೆ.ಬಿ.ಶಿವಕಮಾರ್ ಅವರಿಗೆ ಆರ್.ಪ್ರಸನ್ನಕುಮಾರ್ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಸೂಚಕರಾಗಿ ಹಾಜರಾಗಿದ್ದರು.
ನಾಮಪತ್ರಕ್ಕೆ ಪೂಜೆ, ಪಾದಯಾತ್ರೆ
ಇದಕ್ಕೂ ಮುನ್ನ ಆರ್.ಪ್ರಸನ್ನಕುಮಾರ್ ಅವರು ಶಿವಮೊಗ್ಗದ ರಾಮಣ್ಣ ಶ್ರೇಷ್ಠಿ ಪಾರ್ಕ್ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ದೇವರ ಮುಂದೆ ನಾಮಪತ್ರವನ್ನು ಇರಿಸಿ ಪೂಜೆ ಸಲ್ಲಿಸಲಾಯಿತು. ಪತ್ನಿ ಪ್ರಭಾವತಿ ಪ್ರಸನ್ನಕುಮಾರ್, ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್, ಎನ್.ರಮೇಶ್, ವಿಜಯಕುಮಾರ್ ಸೇರಿದಂತೆ ಹಲವು ಈ ವೇಳೆ ಉಪಸ್ಥಿತರಿದ್ದರು.
ಬಳಿಕ ಪಕ್ಷದ ಕಚೇರಿಗೆ ಆಗಮಿಸಿದ ಆರ್.ಪ್ರಸನ್ನ ಕುಮಾರ್ ಅವರು ಮುಖಂಡರೊಂದಿಗೆ ಚರ್ಚೆ ನಡೆಸಿದರು. ಕಾಂಗ್ರೆಸ್ ಜಿಲ್ಲಾ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು ಸೂಚಕರಾಗಿ ತೆರಳಿ ನಾಮಪತ್ರ ಸಲ್ಲಿಸಿದರು.
ಬಿ-ಫಾರಂ ಇಲ್ಲದೆಯೇ ನಾಮಪತ್ರ
ವಿಧಾನ ಪರಿಷತ್’ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಕಾಂಗ್ರೆಸ್ ಪಕ್ಷ ಇನ್ನೂ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿಲ್ಲ. ಹಾಗಾಗಿ ಬಿ-ಫಾರಂ ಇಲ್ಲದೆಯೇ ಪ್ರಸನ್ನ ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದಾರೆ. ವಿಧಾನ ಪರಿಷತ್’ನ ಹಾಲಿ ಸದಸ್ಯರಾಗಿರುವ ಆರ್.ಪ್ರಸನ್ನ ಕುಮಾರ್ ಅವರ ಅಧಿಕಾರವಧಿ ಪೂರ್ಣಗೊಳ್ಳಲಿದೆ. ಈಗ ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿಯಾಗಿ ಆರ್.ಪ್ರಸನ್ನಕುಮಾರ್ ಕಣಕ್ಕಿಳಿದಿದ್ದಾರೆ.
ಉಮೇದುವಾರಿಕೆ ಸಲ್ಲಿಕೆ ಬಳಿಕ ಚುನಾವಣಾ ರಣತಂತ್ರದ ಕುರಿತು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಭೆ ನಡೆಸಲಾಯಿತು.
ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಮತದಾನ ಮಾಡಬಹುದಾಗಿದೆ. 4129 ಮತದಾರರು ಹಕ್ಕು ಚಲಾಯಿಸಬಹುದಾಗಿದೆ.
LATEST NEWS
- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

About The Editor
ನಿತಿನ್ ಆರ್.ಕೈದೊಟ್ಲು






