ವೀರಶೈವ, ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಅರ್ಜಿ ಸಲ್ಲಿಸುವುದು ಹೇಗೆ?

ಶಿವಮೊಗ್ಗ: ನಗರದ ಶಿವಕುಮಾರ ಸ್ವಾಮೀಜಿಗಳ ನೌಕರರ ಸಂಘವು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸಿದ ವೀರಶೈವ ಲಿಂಗಾಯತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಿದೆ.

ಪತ್ರಿಕಾ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಂಟಿ ಕಾರ್ಯದರ್ಶಿ ಡಾ. ನಟರಾಜ್‌.ಟಿ.ಹೆಚ್‌, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

-pratiba-puraskara-for-veerashaiva-lingayath-students.

ಅರ್ಜಿ ಸಲ್ಲಿಸಲು ಅರ್ಹತೆಗಳೇನು?

  • ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕನಿಷ್ಠ ಶೇ. 75 ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರಬೇಕು.
  • ವಿದ್ಯಾರ್ಥಿಯು 2026ರ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು.
  • ಅಭ್ಯರ್ಥಿಯ ತಂದೆ ಅಥವಾ ತಾಯಿ ಶಿವಮೊಗ್ಗ ನಗರದಲ್ಲಿ ವಾಸವಿರಬೇಕು.
  • ಈ ಪುರಸ್ಕಾರವು ಕೇವಲ ವೀರಶೈವ ಲಿಂಗಾಯತ ನೌಕರರ ಹಾಗೂ ಸಮುದಾಯದ ಮಕ್ಕಳಿಗೆ ಮಾತ್ರ ಸೀಮಿತ.

ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಯ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ದೃಢೀಕೃತ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಮತ್ತು ಶಾಲಾ ವರ್ಗಾವಣೆ ಪತ್ರ ಅಥವಾ ಶಾಲಾ ದಾಖಲಾತಿ ಪುರಾವೆಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ನಟರಾಜ್‌ ತಿಳಿಸಿದರು.

ಆಸಕ್ತರು ಆನ್‌ಲೈನ್ (Online) ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, https://bit.ly/smgssnspp2026 ಲಿಂಕ್ ಬಳಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ, ಮೊಬೈಲ್‌ ನಂಬರ್‌: 9916278470 ಅಥವಾ 9448231968.

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 11, 2026 at 6:01 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 11, 2026