ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JANUARY 2021
ನಾಡು, ನುಡಿಯ ರಕ್ಷಣೆಗಾಗಿ ರಾಜ್ಯದಲ್ಲಿ ಪ್ರದೇಶಿಕ ಪಕ್ಷದ ಅವಶ್ಯಕತೆ ಇದೆ. ಪಕ್ಷವೊಂದರ ಸ್ಥಾಪನೆ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರವೀಣ್ ಶೆಟ್ಟಿ, ರೈತರು, ದಲಿತರು, ಪ್ರಗತಿಪರ ಸಂಘಟನೆಗಳ ಜೊತೆ ಚರ್ಚೆ ನಡೆಸಲಾಗುತ್ತಿದೆ. ನಾಡು, ನುಡಿಯ ರಕ್ಷಣೆಗಾಗಿ ಪ್ರದೇಶಿಕ ಪಕ್ಷ ಸ್ಥಾಪಿಸಲಾಗುತ್ತಿದೆ. ಈ ಸಂಬಂಧ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ. 20 ಸಾವಿರ ಸದಸ್ಯರನ್ನು ಈಗಾಗಲೇ ನೊಂದಾಯಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕನ್ನಡಿಗರಿಗೆ ಉದ್ಯೋಗ ಲಭಿಸಬೇಕು, ಪ್ರಮುಖ ನಿರ್ಧಾರಗಳೆಲ್ಲವು ಕರ್ನಾಟಕದಲ್ಲಿಯೇ ಆಗಬೇಕು ಎಂಬ ಉದ್ದೇಶದಿಂದ ಈ ಪಕ್ಷ ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯ ಪದಾಧಿಕಾರಿಗಳೆಲ್ಲ ಬದಲು
ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪದಾಧಿಕಾರಿಗಳ ಬದಲಾವಣೆ ಮಾಡಲಾಗುತ್ತಿದೆ. ಜನವರಿ 17ರಂದು ಬಳ್ಳಾರಿಯಲ್ಲಿ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಅಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200