ಶಿವಮೊಗ್ಗದಲ್ಲಿ ರಿಜ್ವಾನ್‌ ಅರ್ಷದ್‌ಗೆ ಸಚಿವ ಸ್ಥಾನಕ್ಕಾಗಿ ಮಸೀದಿಯಲ್ಲಿ ಪ್ರಾರ್ಥನೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಕಾಂಗ್ರೆಸ್ ಶಾಸಕ ಹಾಗೂ ಯುವ ನಾಯಕ ರಿಜ್ವಾನ್ ಅರ್ಷದ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಅವರ ಅಭಿಮಾನಿ ಬಳಗದ ವತಿಯಿಂದ ನಗರದ ಕೋರ್ಟ್‌ ಸರ್ಕಲ್‌ನಲ್ಲಿರುವ ಹಜ್ರತ್ ಸೈಯದ್ ಷಾ ಅಲೀಂ ದೀವಾನ್ ಷಾ ಖಾದ್ರಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ರಿಜ್ವಾನ್ ಅರ್ಷದ್ ಅಭಿಮಾನಿ ಬಳಗದ ಅಧ್ಯಕ್ಷ ಮೊಹಮ್ಮದ್ ಆರಿಫ್ ಉಲ್ಲಾ ನೇತೃತ್ವದಲ್ಲಿ ದರ್ಗಾಕ್ಕೆ ಭೇಟಿ ನೀಡಿದ ಪ್ರಮುಖರು, ಚಾದರ ಹೊದಿಸಿ ಪ್ರಾರ್ಥನೆ ಸಲ್ಲಿಸಿದರು.

Prayer-For-Rizwan-Arshad.

ಈ ಸಂದರ್ಭ ಮಾಧ್ಯಮಗಳಿಗೆ ಮಾತನಾಡಿದ ಮೊಹಮ್ಮದ್ ಆರಿಫ್ ಉಲ್ಲಾ, ‘ರಿಜ್ವಾನ್ ಅವರು ಎನ್‌ಎಸ್‌ಯುಐ ಮತ್ತು ಯೂತ್ ಕಾಂಗ್ರೆಸ್ ರಾಜ್ಯ ಅಧ್ಯಕ್ಷರಾಗಿ ಸಂಘಟನೆಯನ್ನು ಬಲಪಡಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಯುವಕರನ್ನು ಸಂಘಟಿಸುವಲ್ಲಿ ಅವರ ಪಾತ್ರ ದೊಡ್ಡದಾಗಿದೆ. ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ಯುವ ನಾಯಕತ್ವಕ್ಕೆ ಆದ್ಯತೆ ನೀಡಬೇಕಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಹಿರಿಯ ನಾಯಕರು ರಿಜ್ವಾನ್ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಮನವಿ ಮಾಡಿದರು.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!