SHIVAMOGGA LIVE NEWS | 5 JANUARY 2024
SHIMOGA : ಪ್ರೀ ಪೇಡ್ ಆಟೋ ಕೌಂಟರ್‌ಗಳನ್ನು ತೆರೆಯಲು ಮತ್ತು ರೈಲ್ವೆ ನಿಲ್ದಾಣದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಕ್ಕೆ 20 ದಿನ ಗುಡುವು ನೀಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಸೂಚನೆ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಇನ್ನು 20 ದಿನದಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣ ಮತ್ತು ಬಸ್ ನಿಲ್ದಾಣಗಳಲ್ಲಿ ಪ್ರಿ ಪೇಡ್ ಆಟೋ ಕೌಂಟರ್‌ಗಳನ್ನು ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರೈಲ್ವೆ ನಿಲ್ದಾಣದಿಂದ ಬಸ್ ವ್ಯವಸ್ಥೆ
ಇನ್ನು, ರೈಲ್ವೆ ನಿಲ್ದಾಣದಿಂದ ಬಸ್ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಬೇಕು. 20 ದಿನದೊಳಗೆ ಬಸ್ ಸಂಚಾರ ಆರಂಭಿಸಬೇಕು. ಬಸ್ ನಿಲುಗಡೆ ತಾಣದ ಕುರಿತು ಆರ್‌ಟಿಒ, ಆಟೋ ಚಾಲಕರ ಸಂಘ, ಸಂಚಾರ ಪೊಲೀಸರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಸರ್ವೆ ಮಾಡಿ ಸ್ಥಳ ನಿಗದಿಪಡಿಸಬೇಕು ಎಂದು ಸೂಚಿಸಿದರು.
ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಪ್ರಯಾಣಿಕರ ಅನುಕೂಲಕ್ಕೆ ಕೆಎಸ್‌ಆರ್‌ಟಿಸಿ ಬಸ್ ಅಗತ್ಯತೆ ಕುರಿತು ಶಿವಮೊಗ್ಗ ಲೈವ್ ಈ ಹಿಂದೆ ವರದಿ ಮಾಡಿತ್ತು. ಇದು ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಇಲ್ಲಿದೆ ಆ ಲಿಂಕ್ – ವಿಮಾನ ನಿಲ್ದಾಣಕ್ಕೆ ಅರ್ಧ ಗಂಟೆಗೊಂದು KSRTC ಬಸ್, ರೈಲ್ವೆ ನಿಲ್ದಾಣಕ್ಕೆ ಯಾಕಿಲ್ಲ ಇಂತಹ ಸರ್ವಿಸ್?