ಅಕ್ಷಯ ತೃತೀಯದಂದು ಜಾಗೃತರಾಗಿರಿ, ವಿಷಯ ಗೊತ್ತಾದರೆ ಜಿಲ್ಲಾಡಳಿತಕ್ಕೆ ತಿಳಿಸಿ, ಏನದು?

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

ಶಿವಮೊಗ್ಗ: ಅಕ್ಷಯ ತೃತೀಯ (Akshaya Tritiya) ದಿನದಂದು ಜಿಲ್ಲೆಯಲ್ಲಿ ಬಾಲ್ಯವಿವಾಹಗಳು ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಇದನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಲ್ಯವಿವಾಹವು ಸಾಮಾಜಿಕ ಪಿಡುಗಾಗಿದ್ದು, ಇದು ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕ ಬೆಳವಣಿಗೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ. ಅಕ್ಷಯ ತೃತೀಯದಂತಹ ಶುಭ ಮುಹೂರ್ತದ ದಿನಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗಿ ನಡೆಯುವ ಸಾಧ್ಯತೆಗಳಿವೆ. ಈ ಬಗ್ಗೆ ಸಾರ್ವಜನಿಕರು ಜಾಗೃತರಾಗಿರಬೇಕು ಎಂದು ಪ್ರಕಟಣೆ ತಿಳಿಸಿದೆ.

himoga-DC-office-and-Police-jeep-in-front-of-office

himoga-DC-office-and-Police-jeep-in-front-of-office

ಏ.20 ಅಕ್ಷಯ ತೃತೀಯ ಆಚರಿಸಲಾಗುತ್ತಿದೆ. ಜಿಲ್ಲಾದ್ಯಂತ ನಡೆಯುವ ವಿವಾಹಗಳ ಮೇಲೆ ಹೆಚ್ಚಿನ ನಿಗಾ ಇರಿಸಲಾಗುವುದು. ಬಾಲ್ಯವಿವಾಹ ಮಾಡುವುದು ಅಥವಾ ಅದಕ್ಕೆ ಪ್ರೇರಣೆ ನೀಡುವುದು ಕಾನೂನುಬಾಹಿರ. ಎಲ್ಲಿಯಾದರೂ ಬಾಲ್ಯವಿವಾಹ ನಡೆಯುವ ಬಗ್ಗೆ ಮಾಹಿತಿ ಲಭಿಸಿದಲ್ಲಿ ಸರ್ಕಾರ ನೇಮಿಸಲ್ಪಟ್ಟ ಗ್ರಾಮ, ತಾಲೂಕು, ಜಿಲ್ಲಾ ಮಟ್ಟದ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಅಥವಾ ಮಕ್ಕಳ ಸಹಾಯವಾಣಿ: 1098, ಪೊಲೀಸ್ ಸಹಾಯವಾಣಿ: 112 ಕರೆ ಮಾಡಿ ಮಾಹಿತಿ ನೀಡಬೇಕು.

ಇದನ್ನೂ ಓದಿ : ಕುಟುಂಬದವರೆಲ್ಲ ಕೊಳ್ಳೆಗಾಲದಲ್ಲಿದ್ದಾಗ ಗಾಜನೂರಿನ ಮನೆಯಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಮಾಯ

ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿಡಲಾಗುವುದು. ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಮೂಲಕ ಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನವಿ ಮಾಡಿದ್ದಾರೆ.

ಹೆಚ್ಚಿನ Shimoga News, Shivamogga News ಮತ್ತು SHIVAMOGGA CITY ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.

© ಶಿವಮೊಗ್ಗ ಲೈವ್‌ : ಏಪ್ರಿಲ್ 16, 2026

Leave a Comment