ಶಿವಮೊಗ್ಗ ಲೈವ್.ಕಾಂ | SHIMOGA | 20 ಮೇ 2020
ಒಂದೇ ದಿನ ಶಿವಮೊಗ್ಗ ಜಿಲ್ಲೆಯಲ್ಲಿ 329 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಶಿವಮೊಗ್ಗ ಜಿಲ್ಲೆಯಲ್ಲಿ ಕಂಡು ಬಂದಿದ್ದ ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಗಂಟಲ ದ್ರವ ತಪಾಸಣೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಎರಡನೇ ಹಂತದ ಸಂಪರ್ಕ ಹೊಂದಿದ್ದವರ ತಪಾಸಣೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಪರೀಕ್ಷೆ ಹೆಚ್ಚಳ
ಜಿಲ್ಲೆಯಲ್ಲಿ ಇದುವರೆಗೆ 5172 ಮಂದಿಯ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗಿದೆ. ಇದರ ಪೈಕಿ 4828 ಫಲಿತಾಂಶ ಬಂದಿದ್ದು, 320 ಬರಬೇಕಿದೆ. 4804 ನೆಗೆಟಿವ್ ಬಂದಿದೆ. ಹೊರ ರಾಜ್ಯಗಳಿಂದ ಆಗಮಿಸಿದ್ದ 1158 ಜನರನ್ನು ಕ್ವಾರೆಂಟೈನ್ ಮಾಡಿ ಪರೀಕ್ಷೆ ನಡೆಸಲಾಗಿದೆ. 943 ಫಲಿತಾಂಶ ಬಂದಿದೆ. ಪ್ರಸ್ತುತ ಜಿಲ್ಲೆಗೆ ಪ್ರತಿದಿನ 50ರಿಂದ 70ಮಂದಿ ಹೊರ ರಾಜ್ಯಗಳಿಂದ ಆಗಮಿಸುತ್ತಿದ್ದಾರೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200