ಶಿವಮೊಗ್ಗ ಲೈವ್.ಕಾಂ | SHIMOGA NEWS | 7 JUNE 2021
ಕರೋನ ಲಾಕ್ ಡೌನ್ ಖಾಸಗಿ ಬಸ್ ಮಾಲೀಕರನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿದೆ. ಹಾಗಾಗಿ ಸರ್ಕಾರ ರಸ್ತೆ ತೆರಿಗೆ ವಿನಾಯಿತಿ ನೀಡಬೇಕು ಅಂತಾ ಮಾಲೀಕರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಸ್ ಮಾಲೀಕರ ಸಂಘದ ಅಧ್ಯಕ್ಷ ಆರ್.ರಂಗಪ್ಪ, ಕಳೆದ ಲಾಕ್ ಡೌನ್ ಅವಧಿಯಲ್ಲಿ ನಮ್ಮ ಉದ್ಯಮ ಭಾರಿ ನಷ್ಟ ಅನುಭವಿಸಿತು. ಈ ಬಾರಿಯೂ ನಷ್ಟಕ್ಕೆ ಸಿಲುಕಿದೆ. ಆದ್ದರಿಂದ ಬಸ್ ಸಂಚಾರ ಆರಂಭಿಸಿದ ಆರು ತಿಂಗಳು ರಸ್ತೆ ತೆರಿಗೆ ವಿನಾಯಿತಿ ನೀಡಬೇಕು ಎಂದು ಆಗ್ರಹಿಸಿದರು.
ಡಿಸೇಲ್ ಬೆಲೆ ಹೆಚ್ಚಳ, ಬಿಡಿ ಭಾಗಗಳ ದರವು ದುಬಾರಿಯಾಗಿದೆ. ಈ ನಡುವೆ ಲಾಕ್ ಡೌನ್‍ನಿಂದಾಗಿ ಬಸ್ ಓಡಿಸುವುದೆ ಕಷ್ಟವಾಗಿದೆ. ಬ್ಯಾಂಕ್, ಫೈನಾನ್ಸ್, ಸಹಕಾರ ಸಂಘಗಳಲ್ಲಿ ಸಾಲ ಪಡೆದಿದ್ದೇವೆ. ಲಾಕ್ ಡೌನ್ ಅವಧಿಯಲ್ಲಿ ಈ ಸಾಲದ ಕಂತು ಪಾವತಿ ವಿಸ್ತರಣೆ ಮತ್ತು ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಸಾರಿಗೆ ನೌಕರರನ್ನು ಫ್ರಂಟ್ ಲೈನ್ ವಾರಿಯರ್ಸ್‍ಗಳೆಂದು ಸರ್ಕಾರ ಪರಿಗಣಿಸಬೇಕು. ಅವರಿಗೂ ಪರಿಹಾರ ನೀಡಬೇಕು ಎಂದು ರಂಗಪ್ಪ ಮನವಿ ಮಾಡಿದರು.
ಬಸ್ ಮಾಲೀಕರ ಸಂಘದ ಬೇಡಿಕೆಯ ವಿಡಿಯೋ ರಿಪೋರ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]