ಶಿವಮೊಗ್ಗ ಲೈವ್.ಕಾಂ | SHIMOGA NEWS | 30 JUNE 2021
ಲಾಕ್ ಡೌನ್ನಿಂದಾಗಿ ಸ್ಥಗಿತವಾಗಿದ್ದ ಖಾಸಗಿ ಬಸ್ ಸಂಚಾರ ಪುನಾರಂಭವಾಗುತ್ತಿದೆ. ಜುಲೈ 1ರಿಂದಲೆ ಕೆಲವು ಖಾಸಗಿ ಬಸ್ಗಳು ರಸ್ತೆಗಿಳಿಯಲಿವೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲೆಯ ಜೀವನನಾಡಿಯಾಗಿರುವ ಖಾಸಗಿ ಬಸ್ಸುಗಳು ಪುನಾರಂಭ ಆಗುತ್ತಿರುವುದು ಗ್ರಾಮೀಣ ಭಾಗದ ಜನರು ನಿಟ್ಟುಸಿರು ಬಿಡುವಂತಾಗಿದೆ. ಶಿವಮೊಗ್ಗದಲ್ಲಿ ಸಭೆ ನಡೆಸಿದ ಖಾಸಗಿ ಬಸ್ ಮಾಲೀಕರು, ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಬಸ್ ಸೇವೆ ಒದಗಿಸಲು ತೀರ್ಮಾನಿಸಿದ್ದಾರೆ.
ಶೇ.25ರಷ್ಟು ಬಸ್ಸುಗಳ ಸಂಚಾರ
ಲಾಕ್ ಡೌನ್ ಹಿನ್ನೆಲೆ ಏಪ್ರಿಲ್ ಕೊನೆಯ ವಾರದಿಂದ ಬಸ್ ಸಂಚಾರ ಸ್ಥಗಿತವಾಗಿತ್ತು. ಜೂನ್ ಅಂತ್ಯದವರೆಗೆ ಬಸ್ಸುಗಳು ರಸ್ತೆಗಿಳಿಯಲಿಲ್ಲ. ಮೊದಲ ಹಂತದಲ್ಲಿ ಶೇ.25ರಷ್ಟು ಬಸ್ಸುಗಳನ್ನಾದರೂ ರಸ್ತೆಗಿಳಿಸುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಸುಮಾರು 600 ಖಾಸಗಿ ಬಸ್ಸುಗಳಿದ್ದು, ಪ್ರಯಾಣಿಕರ ಅನುಕೂಲಕ್ಕೆ ಅನುಗುಣವಾಗಿ ಬಸ್ಸುಗಳು ರಸ್ತೆಗಿಳಿಯಲಿವೆ.
ಇದನ್ನೂ ಓದಿ | ಶಿವಮೊಗ್ಗದಲ್ಲಿ ಖಾಸಗಿ ಬಸ್ ಪುನಾರಂಭ ವಿಳಂಬಕ್ಕೆ ಐದು ಕಾರಣ, ಏನದು?
ಪ್ರಯಾಣ ದರ ಹೆಚ್ಚಳಕ್ಕೆ ಮನವಿ
ಕಳೆದ ವರ್ಷ ಲಾಕ್ ಡೌನ್ ವೇಳೆ 9 ತಿಂಗಳು ಬಸ್ ಸಂಚಾರ ಸ್ಥಗಿತಗೊಂಡಿತ್ತು. ಈ ಬಾರಿಯು ಬಸ್ಸುಗಳು ರಸ್ತೆಗಿಳಿಯದೆ ಮಾಲೀಕರು ಸಂಕಷ್ಟದಲ್ಲಿದ್ದಾರೆ. ಈ ನಡುವೆ ಡಿಸೇಲ್ ದರವು ಹೆಚ್ಚಳವಾಗಿದೆ. ಹಾಗಾಗಿ ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ಬಸ್ ಮಾಲೀಕರ ಸಂಘ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಿದೆ.
ಶೇ.25ರಷ್ಟು ಪ್ರಯಾಣ ಹೆಚ್ಚಳಕ್ಕೆ ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲು ನಿರ್ಧಾರ ಕೈಗೊಳ್ಳಲಾಗಿದೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200