ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 APRIL 2021
ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ಸಂಕಷ್ಟ ಆಗಬಾರದು ಎಂದು ರಾಜ್ಯ ಸರ್ಕಾರ ಖಾಸಗಿ ಬಸ್ಗಳಿಗೆ ಮುಕ್ತ ಪರ್ಮಿಟ್ ನೀಡಿದೆ. ಸರ್ಕಾರಿ ಮಾರ್ಗದಲ್ಲೂ ಖಾಸಗಿ ಬಸ್ಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೂರದ ಊರುಗಳಿಗೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಲ್ಲಿ ಖಾಸಗಿ ಬಸ್ಗಳು ರಸ್ತೆಗಿಳಿದಿವೆ.
ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದಲೇ ಖಾಸಗಿ ಬಸ್ಗಳು ಸಂಚರಿಸುತ್ತಿವೆ. ನಿಲ್ದಾಣದೊಳಗೆ ಖಾಸಗಿ ಬಸ್ ನಿಲ್ಲಲು ಅವಕಾಶವಿಲ್ಲ. ಆದರೆ ಹೊರಾಂಗಣದಲ್ಲಿ ಬಸ್ಸುಗಳನ್ನು ನಿಲ್ಲಿಸಲಾಗಿದೆ.
ಇದನ್ನೂ ಓದಿ | ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಖಾಲಿ ಖಾಲಿ, ಹೇಗಿದೆ ಮುಷ್ಕರ? ಬರ್ತಿದ್ದಾರಾ ಸಿಬ್ಬಂದಿಗಳು?
ಬೆಂಗಳೂರು, ಮೈಸೂರು, ಹರಿಹರ – ದಾವಣಗೆರೆ ಸೇರಿದಂತೆ ವಿವಿಧೆಡೆ ಖಾಸಗಿ ಬಸ್ಸುಗಳು ಸಂಚಾರಿಸುತ್ತಿವೆ. ಬೆಳಗ್ಗೆಯಿಂದಲೇ ಟೂರಿಸ್ಟ್ ಬಸ್ಸುಗಳು ಸೇರಿದಂತೆ ವಿವಿಧ ಪರ್ಮಿಟ್ ಹೊಂದಿರುವ ಬಸ್ಸುಗಳು ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ.
ದುಬಾರಿ ದರ ಇಲ್ಲ
ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಹಿನ್ನೆಲೆ ಖಾಸಗಿ ಬಸ್ಸುಗಳ ಸಿಬ್ಬಂದಿ ದುಬಾರಿ ದರವನ್ನು ವಸೂಲಿ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಹಾಗಾಗಿ ಶಿವಮೊಗ್ಗದಿಂದ ಸಂಚರಿಸುತ್ತಿರುವ ಖಾಸಗಿ ಬಸ್ಸುಗಳಲ್ಲಿ ದುಬಾರಿ ದರ ಪಡೆಯುತ್ತಿಲ್ಲ ಎಂದು ಬಸ್ ಸಿಬ್ಬಂದಿ ಹೇಳುತ್ತಿದ್ದಾರೆ. ಆದರೆ ಸರ್ಕಾರಿ ಬಸ್ಸಿಗೆ ಹೋಲಿಸಿದೆ ಟಿಕೆಟ್ ದರ ಹೆಚ್ಚಿದೆ ಎಂದು ಪ್ರಯಾಣಿಕರು ತಿಳಿಸುತ್ತಿದ್ದಾರೆ.
ಸರ್ಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ | ವಿಡಿಯೋ ರಿಪೋರ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422