ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MAY 2023
SHIMOGA : ವಿಧಾನಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಸುತ್ತಮುತ್ತ ಮೇ 13ರ ಬೆಳಗ್ಗೆ 6 ಗಂಟೆಯಿಂದ ಮೇ 14ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ (Prohibition) ವಿಧಿಸಲಾಗಿದೆ. ಮೇ 13ರಂದು ಮತ ಎಣಿಕ ಕಾರ್ಯದ ಹಿನ್ನೆಲೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಈ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ – ಮನೆ ಬಾಗಿಲು ಹಾಕಿದಂತೆಯೇ ಇತ್ತು, ರೂಮಿಗೆ ಹೋದಾಗ ಮಾಲೀಕನ ಕುಟುಂಬಕ್ಕೆ ಕಾದಿತ್ತು ಶಾಕ್
ನಿಷೇಧಾಜ್ಞೆ ಹಿನ್ನೆಲೆ ಸಹ್ಯಾದ್ರಿ ಕಾಲೇಜು ಬಳಿ 5ಕ್ಕಿಂತಲು ಹೆಚ್ಚು ಜನರು ಗುಂಪುಗೂಡುವಂತಿಲ್ಲ. ಮೆರವಣಿಗೆ, ಸಭೆ, ಸಮಾರಂಭ, ವಿಜಯೋತ್ಸವ ಹಾಗೂ ಸಮಾವೇಶಗಳನ್ನು (Prohibition) ನಡೆಸುವಂತಿಲ್ಲ. ಮಾರಕಾಸ್ತ್ರ, ಸ್ಪೋಟಕಗಳನ್ನು ಈ ಭಾಗದಲ್ಲಿ ಕೊಂಡೊಯ್ಯುವಂತಿಲ್ಲ. ಅಣಕು ಶವ ಪ್ರದರ್ಶನ, ಸಂಭ್ರಮಾಚರಣೆ, ಘೋಷಣೆ ಕೂಗುವುದು, ವಾದ್ಯಗಳನ್ನು ಬಾರಿಸುವುದನ್ನು ನಿಷೇಧಿಸಲಾಗಿದೆ.
Admission Open for 2023-2024
ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ, ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಪ್ರಾರ್ಥನೆಗೆ ತೆರಳುವವರಿಗೆ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಈ ನಿರ್ಬಂಧ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






