ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 19 DECEMBER 2020
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಶೇ.15ರಷ್ಟು ಹೆಚ್ಚಳ ಮಾಡಲಾಗಿದೆ. ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ನಗರದ ಅಭಿವೃದ್ಧಿಗೆ ತೆರಿಗೆ ಹೆಚ್ಚಳ
ನಗರದ ಅಭಿವೃದ್ಧಿ, ಪಾಲಿಕೆಗೆ ಸಂಪನ್ಮೂಲ ಕ್ರೋಢೀಕರಣ ಮಾಡುವ ಸಲುವಾಗಿ 2020-21ನೇ ಸಾಲಿಗೆ ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲಾಗಿದೆ. ಮಾಲೀಕರು ಪರಿಷ್ಕರಿಸಿದ ತೆರಿಗೆಯನ್ನು ಪಾವತಿಸಬೇಕು ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಂಡ ರಹಿತ ಪಾವತಿಗೆ ಗಡುವು
ಪರಿಷ್ಕೃತ ಆಸ್ತಿ ತೆರಿಗೆಯನ್ನು ಪಾವತಿಸಲು 2021ರ ಮಾರ್ಚ್ ತಿಂಗಳವರೆಗೆ ಕಾಲವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಪಾವತಿಸಿದರೆ ದಂಡ ಇರುವುದಿಲ್ಲ ಎಂದು ಮಹಾನಗರ ಪಾಲಿಕೆ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೂರು ವರ್ಷಕ್ಕೊಮ್ಮೆ ತೆರಿಗೆ
ಕರ್ನಾಟಕ ಪೌರ ನಿಗಮಗಳ ಪ್ರಕಾರ ಪ್ರತಿ ಮೂರು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಅವಕಾಶವಿದೆ. ಶೇ.15 ರಿಂದ ಶೇ.30ರವರೆಗೆ ಆಸ್ತಿ ತೆರಿಗೆ ಹೆಚ್ಚಳ ಮಾಡಬಹುದಾಗಿದೆ. ಈ ಹಿಂದೆ, ಮೂರು ವರ್ಷಗಳ ನಾಲ್ಕು ಬ್ಲಾಕ್‍ಗಳ ಅವಧಿಯಲ್ಲಿ ತೆರಿಗೆ ಹೆಚ್ಚಳ ಮಾಡಲಾಗಿದೆ. 2017 ರಿಂದ 2020ರ ಮಾರ್ಚ್ ಅವಧಿಯಲ್ಲಿ ವಸತಿ ಉದ್ದೇಶದ ಕಟ್ಟಡಗಳಿಗೆ ಶೇ.20, ವಾಣಿಜ್ಯ ಕಟ್ಟಡಗಳಿಗೆ ಶೇ.25, ಕೈಗಾರಿಕಾ ಉದ್ದೇಶದ ಕಟ್ಟಡಗಳಿಗೆ ಶೇ.28, ಖಾಲಿ ನಿವೇಶನಗಳಿಗೆ ಶೇ.30ರಷ್ಟು ಆಸ್ತಿ ತೆರಿಗೆ ಇತ್ತು. 2020 – 21ನೇ ಸಾಲಿನಿಂದ ಮುಂದಿನ ಮೂರು ವರ್ಷದ ಅವಧಿಗೆ ಶೇ.15ರಷ್ಟು ತೆರಿಗೆ ಹೆಚ್ಚಳ ಮಾಡಲಾಗಿದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]