ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 24 SEPTEMBER 2024 : ಮೂಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್‌ಗೆ (Prosecution) ಹೈಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆ ತನಿಖೆಗೆ ಮುಕ್ತ ವಾತಾವರಣ ನಿರ್ಮಿಸಬೇಕಿದೆ. ಹಾಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ ತನಿಖೆಗೆ ಅವಕಾಶ ಕಲ್ಪಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗಾರರೊಂದಿಗೆ ಮಾತನಾಡಿ ಬಿ.ವೈ.ರಾಘವೇಂದ್ರ, ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ನ್ಯಾಯಾಲಯ ಒಪ್ಪಿಗೆ ನೀಡಿದೆ. ಕಾನೂನು ಎಲ್ಲರಿಗೂ ಒಂದೇ ಎಂಬುದು ಕೋರ್ಟ್‌ನ ತೀರ್ಪು ಮತ್ತೆ ಸ್ಪಷ್ಟಪಡಿಸಿದೆ. ಒಳ್ಳೆ ರೀತಿಯ ತನಿಖೆ ಅಗಬೇಕಿದೆ. ಹಾಗಾಗಿ ಸಿಎಂ ಅವರು ದೂರ ಅಧಿಕಾರದಿಂದ ಉಳಿಯಬೇಕಾಗುತ್ತದೆ. ಕಾನೂನಿಗೆ ಗೌರವ ಕೊಡುವ ಕೆಲಸ ಅಗಬೇಕಿದೆ ಎಂದರು.
ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಕ್ಕಿದೆ. ಇನ್ಮುಂದೆ ವಿಚಾರಣೆ ಆಗಲಿದೆ. ತಪ್ಪೋ, ಸರಿಯೋ ಅನ್ನುವುದು ಅಲ್ಲಿ ಗೊತ್ತಾಗಲಿದೆ. ಆರೋಪ ಮುಕ್ತವಾಗಿ ಬರಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇವೆ. ಆದರೆ ತನಿಖೆಗೆ ಮುಕ್ತ ವಾತಾವರಣ ನಿರ್ಮಿಸಬೇಕಿದೆ. ರಾಜೀನಾಮೆ ಕೊಟ್ಟು ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ರಾಘವೇಂದ್ರ ಆಗ್ರಹಿಸಿದರು.
ಇದನ್ನೂ ಓದಿ » ಇತ್ತು ಸಂಜೆ ವೇಳೆಗೆ ಬ್ಯಾಂಕ್ ಖಾತೆಗೆ 25 ಲಕ್ಷ ರೂ. ಹಣ