ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | ACTOR | 28 ಏಪ್ರಿಲ್ 2022
ಕನ್ನಡ ಮತ್ತು ನಟ ಸುದೀಪ್ ವಿರುದ್ಧ ಅವಮಾನಕರ ಟ್ವೀಟ್ ಮಾಡಿದ ಬಾಲಿವುಡ್ ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಶಿವಮೊಗ್ಗದಲ್ಲಿ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿಲಾಯಿತು.
ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ನಟ ಅಜಯ್ ದೇವಗನ್ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿ ಘೋಷಣೆ ಕೂಗಲಾಯಿತು.
ನಟ ಸುದೀಪ್ ಅವರಿಗೆ ಅಜಯ್ ದೇವಗನ್ ಅವಮಾನಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ನಟ ಅಜಯ್ ದೇವಗನ್ ಅವರು ನಟ ಸುದೀಪ್ ಅವರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಸಂಘಟನೆ ಅಧ್ಯಕ್ಷ ವಾಟಾಳ್ ಮಂಜುನಾಥ್, ರವಿ ಸಾಧು ಶೆಟ್ಟಿ, ಮಾರುತಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ – ನೊಟೀಸ್ ಕೊಟ್ಟ ಸಿಐಡಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422