ಶಿವಮೊಗ್ಗ ವಿಮಾನ ನಿಲ್ದಾಣ, ತನಿಖೆಗೆ ಒತ್ತಾಯ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 1 AUGUST 2023

SHIMOGA : ಸೋಗಾನೆ ವಿಮಾನ ನಿಲ್ದಾಣ (Airport) ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ. ಈ ಹಿನ್ನಲೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಬಾಕಿ ಇರುವ ಬಿಲ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

DK-Shivakumar-abhimani-Mohan-protest-against-airport-scam

ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘದ ಪ್ರಮುಖರು ಮತ್ತು ಕಾಂಗ್ರಸ್ ನಾಯಕರು, ವಿಮಾನ ನಿಲ್ದಾಣ ಕಾಮಗಾರಿಯ ಪರಿಷ್ಕೃತ ಮೊತ್ತದಲ್ಲಿ ಅವ್ಯವಹಾರ ನಡೆದಿರುವ ಶಂಕೆ ಇದೆ. ಈ ಕುರಿತು ನ್ಯಾಯಾಂಗ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪರಿಷ್ಕೃತ ಮೊತ್ತದ ಬಗ್ಗೆ ಅನುಮಾನ

ವಿಮಾನ ನಿಲ್ದಾಣ (Airport) ಕಾಮಗಾರಿಗೆ ಆರಂಭದಲ್ಲಿ 220 ಕೋಟಿ ರೂ. ಅಂದಾಜು ವೆಚ್ಚ ನಿಗದಿಪಡಿಸಲಾಗಿತ್ತು. ಆಮೇಲೆ ಅಂದಾಜು ವೆಚ್ಚ ಪರಿಷ್ಕರಿಸಿ 449.22 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಇದರ ಕುರಿತು ತನಿಖೆ ಆಗಬೇಕಿದೆ ಎಂದರು.

R Mohan - DK Shivakumar Abhimani Balaga

ರನ್ ವೇ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ತನಿಖೆ ನಡೆಸಬೇಕು ಎಂದು ಸದನದಲ್ಲಿ ಪ್ರಸ್ತಾಪಿಸಿದ್ದರು. ಈ ಬಗ್ಗೆ ಕೂಲಂಕಷ ತನಿಖೆ ಆಗಬೇಕು. ಅಕ್ರಮ ನಡೆದಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.ಆರ್.ಮೋಹನ್, ಕೆಪಿಸಿಸಿ ರಾಜ್ಯ ಸಂಯೋಜಕ

ಇದನ್ನೂ ಓದಿ – ಶಿವಮೊಗ್ಗ ಕಮಿಷನರ್‌ಗೆ ಪ್ರತಿ ದಿನ ಊಟ ಬಡಿಸುತ್ತಿದ್ದ ನೌಕರ, ನಿವೃತ್ತಿ ದಿನ ಮಧ್ಯಾಹ್ನ ಆಗಿದ್ದೆ ಬೇರೆ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ.ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ, ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷ ತಾಕ್ರಾ ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಪ್ಪ ಸೇರಿದಂತೆ ಹಲವರು ಇದ್ದರು.

PARISHRAMA NEET Academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment