ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 1 AUGUST 2023
SHIMOGA : ಸೋಗಾನೆ ವಿಮಾನ ನಿಲ್ದಾಣ (Airport) ನಿರ್ಮಾಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ. ಈ ಹಿನ್ನಲೆ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು. ಬಾಕಿ ಇರುವ ಬಿಲ್ ತಡೆ ಹಿಡಿಯಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘದ ಪ್ರಮುಖರು ಮತ್ತು ಕಾಂಗ್ರಸ್ ನಾಯಕರು, ವಿಮಾನ ನಿಲ್ದಾಣ ಕಾಮಗಾರಿಯ ಪರಿಷ್ಕೃತ ಮೊತ್ತದಲ್ಲಿ ಅವ್ಯವಹಾರ ನಡೆದಿರುವ ಶಂಕೆ ಇದೆ. ಈ ಕುರಿತು ನ್ಯಾಯಾಂಗ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪರಿಷ್ಕೃತ ಮೊತ್ತದ ಬಗ್ಗೆ ಅನುಮಾನ
ವಿಮಾನ ನಿಲ್ದಾಣ (Airport) ಕಾಮಗಾರಿಗೆ ಆರಂಭದಲ್ಲಿ 220 ಕೋಟಿ ರೂ. ಅಂದಾಜು ವೆಚ್ಚ ನಿಗದಿಪಡಿಸಲಾಗಿತ್ತು. ಆಮೇಲೆ ಅಂದಾಜು ವೆಚ್ಚ ಪರಿಷ್ಕರಿಸಿ 449.22 ಕೋಟಿ ರೂ.ಗೆ ಹೆಚ್ಚಳ ಮಾಡಲಾಗಿದೆ. ಇದರ ಕುರಿತು ತನಿಖೆ ಆಗಬೇಕಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗ ಕಮಿಷನರ್‌ಗೆ ಪ್ರತಿ ದಿನ ಊಟ ಬಡಿಸುತ್ತಿದ್ದ ನೌಕರ, ನಿವೃತ್ತಿ ದಿನ ಮಧ್ಯಾಹ್ನ ಆಗಿದ್ದೆ ಬೇರೆ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ.ಶಿವಕುಮಾರ್, ಜಿಲ್ಲಾ ಕಾಂಗ್ರೆಸ್ ವಕ್ತಾರ ರಮೇಶ್ ಶಂಕರಘಟ್ಟ, ಕಿಸಾನ್ ಸೆಲ್ ಜಿಲ್ಲಾ ಕಾರ್ಯಾಧ್ಯಕ್ಷ ತಾಕ್ರಾ ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಸಿದ್ದಪ್ಪ ಸೇರಿದಂತೆ ಹಲವರು ಇದ್ದರು.