ಅಮಿತ್‌ ಷಾ ವಿರುದ್ಧ ಶಿವಮೊಗ್ಗದಲ್ಲಿ ಮುಂದುವರೆದ ಆಕ್ರೋಶ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS, 21 DECEMBER 2024

ಶಿವಮೊಗ್ಗ : ಕೇಂದ್ರ ಗೃಹ ಸಚಿವ ಅಮಿತ್‌ ಷಾ ಸಂಸತ್ತಿನಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಇಂದೂ ಶಿವಮೊಗ್ಗದಲ್ಲಿ ಪ್ರತಿಭಟನೆಗಳು (Protest) ನಡೆದವು. ಸುದ್ದಿಯ ಮುಂದಿನ 9 ಪ್ಯಾರಾಗಳು ಕೆಳಗಿವೆ.

» ಅಮಿತ್‌ ಷಾ ರಾಜೀನಾಮೆಗೆ ಪಟ್ಟು

ಡಾ. ಬಿ.ಆರ್.ಅಂಬೇಡ್ಕರ್‌ ಅವರ ವಿರುದ್ಧ ಅಗೌರವ ತೋರಿದ ಅಮಿತ್‌ ಷಾ ಕೇಂದ್ರ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಎಸ್‌ಡಿಪಿಐ ಸಂಘಟನೆ ಆಗ್ರಹಿಸಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಎಸ್‌ಡಿಪಿಐ ಕಾರ್ಯಕರ್ತರು, ಬಿಜೆಪಿ ಮತ್ತು ಅಮಿತ್‌ ಷಾ ವಿರುದ್ಧ ಘೋಷಣೆ ಕೂಗಿದರು. ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

SDPI Protest against Amith Shah

ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೂ ಒಳಗಿಂದ ಹೆಡೆ ಎತ್ತಿದ ನಾಗರಹಾವು

» ಡಿಎಸ್‌ಎಸ್‌ ಆಕ್ರೋಶ, ಸಂಪುಟದಿಂದ ವಜಾಗೆ ಆಗ್ರಹ

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ನೇತೃತ್ವದಲ್ಲಿ ಇವತ್ತು ಗೃಹ ಸಚಿವ ಅಮಿತ್‌ ಷಾ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದ ಅಡಿಯಲ್ಲಿ ಗೃಹ ಸಚಿವರಾಗಿ ಅಮಿತ್‌ ಷಾ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಿದ್ದೂ ಅಮಿತ್‌ ಷಾ ಅವರು ಡಾ. ಅಂಬೇಡ್ಕರ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಅಮಿತ್‌ ಷಾ ಅವರನ್ನು ಕೂಡಲೆ ಸಂಪುಟದಿಂದ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

DSS Protest against Amith Shah

ಜಿಲ್ಲಾ ಸಂಚಾಲಕ ಎಂ.ಏಳುಕೋಟಿ, ರಾಜ್ಯ ಖಜಾಂಚಿ ಬಿ.ಎ.ಕಾಟ್ಕೆ, ಕಾರ್ಯಕಾರಿ ಸಮಿತಿ ಸದಸ್ಯ ಶಿವಬಸಪ್ಪ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದ ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

Leave a Comment