ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 5 AUGUST 2024 : ಸುಳ್ಳು ಆರೋಪಗಳ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವಾಗುತ್ತಿದೆ ಎಂದು ಆರೋಪಿಸಿ ಶೋಷಿತ ವರ್ಗಗಳ ಮಹಾ ಒಕ್ಕೂಟದ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ (Protest) ನಡೆಸಲಾಯಿತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಯಾರೆಲ್ಲ ಏನೇನು ಹೇಳಿದರು?
ಸಿದ್ದರಾಮಯ್ಯ ಅವರ ಜನಪ್ರಿಯತೆಗೆ ಹೆದರಿ ಬಿಜೆಪಿ, ಜೆಡಿಎಸ್ ಮೈತ್ರಿಕೂಟದ ನಾಯಕರು ಅವರ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ. ಸುಳ್ಳು ಆರೋಪ ಹೊರಿಸಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಯಡಿಯೂರಪ್ಪ ಮತ್ತು ಅವರ ಪುತ್ರರ ಅಕ್ರಮ ಆಸ್ತಿಗಳ ಕುರಿತು ತನಿಖೆಯಾಗಬೇಕಿದೆ.ಬಲ್ಕಿಷ್ ಬಾನು, ವಿಧಾನ ಪರಿಷತ್ ಸದಸ್ಯೆ
ಶಿವಮೊಗ್ಗದಲ್ಲಿಯೇ ಬಿಜೆಪಿ ನಾಯಕರ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಆರ್‌ಟಿಜಿಎಸ್ ಮೂಲಕ ಲಂಚ ಪಡೆದ ಬಿಜೆಪಿಗೆ ಕಾಂಗ್ರೆಸ್ ನಾಯಕರ ಮೇಲೆ ಭ್ರಷ್ಟಾಚಾರದ ಆರೋಪ ಮಾಡುವ ನೈತಿಕತೆ ಇಲ್ಲ. ಐಟಿ, ಇಡಿ ದಾಳಿ ನಡೆಸಿ ಕಾಂಗ್ರೆಸ್ ನಾಯಕರನ್ನು ಬಗ್ಗು ಬಡಿಯುವ ಪ್ರಯತ್ನ ಮಾಡಲಾಗುತ್ತಿದೆ. ಇದರ ವಿರುದ್ಧ ದೇಶಾದ್ಯಂತ ಪಾದಯಾತ್ರೆ ನಡೆಸಬೇಕಾಗುತ್ತದೆ.ಹೆಚ್.ಎಸ್.ಸುಂದರೇಶ್, ಸೂಡಾ ಅಧ್ಯಕ್ಷ
ಬಿಜೆಪಿಗೆ ಜನತಂತ್ರ ವ್ಯವಸ್ಥೆ ಕುರಿತು ನಂಬಿಕೆ ಇಲ್ಲ. ಸದ್ಯದಲ್ಲೇ ಬಿಜೆಪಿಯ ಪಾಪದ ಕೃತ್ಯಗಳು ಶೀಘ್ರದಲ್ಲೇ ಬಯಲಾಗಲಿದೆ. ಸಿದ್ದರಾಮಯ್ಯ ಮಾಸ್ ಲೀಡರ್. ಅವರ ವಿರುದ್ಧದ ಯಾವುದೇ ಕುತಂತ್ರಗಳು ಫಲ ನೀಡುವುದಿಲ್ಲ.ಆರ್.ಎಂ.ಮಂಜುನಾಥ ಗೌಡ, ಎಂಎಡಿಬಿ ಅಧ್ಯಕ್ಷ
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಆರ್.ಪ್ರಸನ್ನ ಕುಮಾರ್, ಪ್ರಮುಖರಾದ ಎಸ್.ಕೆ.ಮರಿಯಪ್ಪ, ಕಲೀಮ್ ಪಾಷಾ, ಅಲ್ತಾಫ್ ಪರ್ವೀಜ್, ಗಿರೀಶ್, ಶರತ್ ಮರಿಯಪ್ಪ, ಚಂದ್ರಭೂಪಾಲ್, ನಾಜೀಮ, ಚಿನ್ನಪ್ಪ, ದೇವಿ ಕುಮಾರ್, ವಿಶ್ವನಾಥ್ ಕಾಶಿ, ಡಾ. ಶ್ರೀನಿವಾಸ ಕರಿಯಣ್ಣ, ಜಿ.ಡಿ.ಮಂಜುನಾಥ್, ಪಾಲಾಕ್ಷಿ, ರಂಗನಾಥ್, ರೇಖಾ ರಂಗನಾಥ್, ನವಲೆ ಮಂಜುನಾಥ್, ನಾಗರಾಜ್ ಕಂಕಾರಿ, ಸ್ಟೆಲ್ಲಾ ಮಾರ್ಟಿನ್, ಡಿಎಸ್‌ಎಸ್ ಮುಖಂಡ ಹಾಲೇಶಪ್ಪ ಸೇರಿದಂತೆ ಹಲವರು ಇದ್ದರು.