ಶಿವಮೊಗ್ಗ ಲೈವ್.ಕಾಂ | SHIMOGA | 13 ಡಿಸೆಂಬರ್ 2019
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ಮುಸ್ಲಿಂ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಜಕೀಯ ಲಾಭಕ್ಕಾಗಿ ಮಸೂದೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮುಸ್ಲಿಂ ಮುತ್ತಹಿದ ಮಹಾಝ್ ಕಮಿಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ನಡೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪೌರತ್ವ ತಿದ್ದುಪಡಿ ಮಸೂದೆಯು ಸಂವಿದಾನದ ಪರಿಚ್ಛೇದ 14 ಮತ್ತು ಅಂತಾರಾಷ್ಟ್ರೀಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ರಾಷ್ಟ್ರಪತಿ ಅವರು ಇದಕ್ಕೆ ಅಂಗೀಕಾರ ನೀಡಬಾರದು ಎಂದು ಒತ್ತಾಯಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Muslim Muttahida Mahaz unit of Shimoga held a protest in front DC office to condem the CAB.