ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 DECEMBER 2022
ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ (cbi raid) ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಕಾಂಗ್ರೆಸ್ ಕಚೇರಿಯಿಂದ ಮಹಾವೀರ ಸರ್ಕಲ್ ವರೆಗೆ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಬಿಜೆಪಿ, ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದೆ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಅವರು, ಬಿಜೆಪಿ ಮತ್ತು ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿವೆ. ಸಿಬಿಐ, ಐಟಿ, ಇಡಿ ಸಂಸ್ಥೆಗಳನ್ನು ದುರ್ಬಳಕೆ (cbi raid) ಮಾಡಿಕೊಂಡು ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 150ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ. ಇದೆ ಕಾರಣಕ್ಕೆ ಕಾಂಗ್ರೆಸ್ ನಾಯಕರನ್ನು ಕಟ್ಟಿ ಹಾಕಲು ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರ ಪದೇ ಪದೆ ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 3 ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಿದ ಜೆಡಿಎಸ್, ಯಾವ ಕ್ಷೇತ್ರ? ಯಾರೆಲ್ಲ ಅಭ್ಯರ್ಥಿಗಳು?
ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್, ಹೆಚ್.ಸಿ.ಯೋಗೇಶ್, ಎಸ್.ಕೆ.ಮರಿಯಪ್ಪ, ವಿ.ನಾರಾಯಣ ಸ್ವಾಮಿ, ದೇವೇಂದ್ರಪ್ಪ, ಹೆಚ್.ಪಿ.ಗಿರೀಶ್, ಮಧುಸೂದನ್ ಸೇರಿದಂತೆ ಹಲವರು ಇದ್ದರು.