ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019
ನೆರೆ ಮತ್ತು ಬರ ಸಂತ್ರಸ್ಥ ರೈತರಿಗೆ ಪರಿಹಾರ ನೀಡದ ರಾಜ್ಯ ಸರ್ಕಾರದ ವಿರುದ್ಧ ನವೆಂಬರ್ 7ರಂದು ಬೆಂಗಳೂರಿನ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಹೆಚ್.ಆರ್.ಬಸವರಾಜಪ್ಪ, ರಾಜ್ಯದಲ್ಲಿ ನೆರೆಯಿಂದ ಸುಮಾರು 4394 ಗ್ರಾಮಗಳು ಮುಳುಗಡೆಯಾಗಿವೆ. 2.5 ಲಕ್ಷಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. 15 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ. ಭೂ ಕುಸಿತದಿಂದ ಭೂಮಿಯೇ ಇಲ್ಲವಾಗಿದೆ. ಸರ್ವಸ್ವವನ್ನು ಕಳೆದುಕೊಂಡ ರೈತರು ಪರಿಹಾರಕ್ಕಾಗಿ ಹಂಬಲಿಸುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಇತ್ತ ಗಮನಹರಿಸದೇ ನಿರ್ಲಕ್ಷ್ಯ ಮನೋಭಾವನೆ ತಾಳಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನವೆಂಬರ್ 7ರಂದು ಬೆಳಿಗ್ಗೆ 11 ಗಂಟೆಗೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ರಾಜ್ಯದ ರೈತರು, ಕೃಷಿ ಕಾರ್ಮಿಕರು, ಸಂತ್ರಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮನವಿ ಮಾಡಿದರು.
ರೈತ ಸಂಘದ ಪ್ರಮುಖರಾದ ಕೆ.ರಾಘವೇಂದ್ರ, ಡಿ.ಹೆಚ್.ರಾಮಚಂದ್ರಪ್ಪ, ಪಿ.ಡಿ.ಮಂಜಪ್ಪ, ಎಸ್.ಶಿವಮೂರ್ತಿ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422