ಶಿವಮೊಗ್ಗ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಏಕವಚನ ಮತ್ತು ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು, ಸಿದ್ದರಾಮಯ್ಯ ಅವರು ಮಹಿಳಾ ವಿರೋಧಿ ಹೇಳಿಕೆ ನೀಡಿದ್ದಾರೆ. ತಕ್ಷಣ ಅವರು ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಅವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಯಾರೆಲ್ಲ ಏನೆಲ್ಲ ಹೇಳಿದರು?
ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ರಶ್ಮಿ ಶ್ರೀನಿವಾಸ್ ಮಾತನಾಡಿ, ‘ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ಸಿದ್ದರಾಮಯ್ಯ ಅವಹೇಳನ ಮಾಡಿದ್ದಾರೆ. ಏಕವಚನದಲ್ಲಿ ಮಾತನಾಡಿದ್ದಾರೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಇದೇ ರೀತಿ ಮಾತನಾಡುತ್ತಾರಾ. ಹಿಂದೆ ರಾಷ್ಟ್ರಪತಿ ವಿರುದ್ಧವು ಸಿದ್ದರಾಮಯ್ಯ ಅವರು ಇದೇ ರೀತಿ ಏಕವಚನ ಪ್ರಯೋಗ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ » ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ, ಡಿ.ಎಸ್.ಅರುಣ್‌ಗೆ ಭರ್ಜರಿ ಗೆಲುವು
ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್ ಮಾತನಾಡಿ, ‘ಅನುಭವ ರಾಜಕಾರಣಿ ಆಗಿರುವ ಸಿದ್ದರಾಮಯ್ಯ ಅವರು ಈ ರೀತಿಯ ಹೇಳಿಕೆ ನೀಡಿ ಅವರ ಮರ್ಯಾದೆಯನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಕುರ್ಚಿ ಕಚ್ಚಾಟದಲ್ಲಿ ಸಿದ್ಧರಾಮಯ್ಯ ಸ್ಥಿಮಿತ ಕಳೆದುಕೊಂಡಿದ್ದಾರೆ. ವಿನಾಶಕಾಲ ವಿಪರೀತ ಬುದ್ದಿ ಎಂಬಂತಾಗಿದೆʼ ಎಂದು ಆರೋಪಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇಂದಿನಿಂದ ಕ್ರಿಕೆಟ್ ಪಂದ್ಯಾವಳಿ, ರಾಷ್ಟ್ರೀಯ ತಂಡದ ಆಯ್ಕೆಗಾರರು ಆಗಮನ, ಎಲ್ಲಿ?

ಮಹಿಳಾ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಯಶೋದ ವೈಷ್ಣವ್, ನಿರ್ಮಲಾ, ನಾಗರಾಜ್, ಚಂದ್ರಶೇಖರ್.ಎಸ್, ಮಾಲ್ತೇಶ್ ಸೇರಿ ಹಲವರು ಇದ್ದರು.
LATEST NEWS
- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

- ಶಿವಮೊಗ್ಗ ಸಿಟಿಯ ಹಲವೆಡೆ ಜನವರಿ 29, 30ರಂದ ಅರ್ಧ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗದಲ್ಲಿ ವಿದ್ಯಾರ್ಥಿಗಳೇ ಟ್ರಾಫಿಕ್ ಪೊಲೀಸರಾದರು, ಸಂಚಾರ ನಿಯಂತ್ರಿಸಿದರು, ಕಾರಣವೇನು?

- ಕರ್ನಾಟಕ ಸಂಘದಿಂದ ಪುಸ್ತಕಗಳಿಗೆ ಬಹುಮಾನ, ಕೃತಿಗಳಿಗೆ ಆಹ್ವಾನ, ಇಲ್ಲಿದೆ ಕಂಪ್ಲೀಟ್ ವಿವರ

About The Editor
ನಿತಿನ್ ಆರ್.ಕೈದೊಟ್ಲು





