ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 02 FEBRUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕಾಂಕ್ರಿಟ್ ರಸ್ತೆಗಳು ತಾಪಮಾನ ಹೆಚ್ಚಿಸಲಿವೆ. ಅವುಗಳನ್ನು ಬೇಕಾಬಿಟ್ಟಿಯಾಗಿ ನಿರ್ಮಿಸಬಾರದು ಎಂದು ಆಗ್ರಹಿಸಿ ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ಸ್ಮಾರ್ಟ್ ಸಿಟಿ ಹೆಸರಿನಲ್ಲಿ ನಗರದ ಹಲವು ಕಡೆ ಕಾಂಕ್ರಿಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ನಗರದೆಲ್ಲೆಡೆ ಈ ಸಿಮೆಂಟ್ ರಸ್ತೆಗಳನ್ನು ಮಾಡುವ ಅವಶ್ಯಕತೆ ಇಲ್ಲ ಇದರಿಂದ ತಾಪಮಾನ ಹೆಚ್ಚುತ್ತದೆ ಮತ್ತು ಪರಿಸರದ ಮೇಲೆ ತೀವ್ರ ಪರಿಣಾಮವಾಗುತ್ತದೆ. ಕಾಂಕ್ರಿಟ್ ರಸ್ತೆಗಳನ್ನು ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ವರ್ಷದಿಂದ ವರ್ಷಕ್ಕೆ ಶಿವಮೊಗ್ಗ ನಗರದಲ್ಲಿ ತಾಪಮಾನ ಹೆಚ್ಚುತ್ತಿದೆ. ಕಾಂಕ್ರಿಟ್ ರಸ್ತೆಗಳು ಹೆಚ್ಚಿದಷ್ಟು ತಾಪಮಾನ ಏರಿಕೆಯಾಗುತ್ತದೆ. ಇದರಿಂದ ದುಂದು ವೆಚ್ಚ ಕೂಡ ಆಗುತ್ತದೆ. ಕಲ್ಲು, ಮರಳು ಮುಂತಾದ ವಸ್ತುಗಳಿಗೆ ಅಧಿಕ ಖರ್ಚು ತಗುಲುತ್ತದೆ ಎಂದರು.
ಶಿವಮೊಗ್ಗ ನಗರದಾದ್ಯಂತ ಸುಮಾರು 100 ಕೋಟಿಗೂ ಹೆಚ್ಚು ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸಲಾಗುತ್ತಿದೆ. ಇದರಿಂದ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ಕೂಡ ಸಾಧ್ಯವಾಗುತ್ತಿಲ್ಲ. ಎಲ್ಲಾ ಇಲಾಖೆಯ ಇಂಜಿನಿಯರ್ಗಳು ಗುಣಮಟ್ಟ ರಸ್ತೆ ಮಾಡಿಸುವಲ್ಲಿ ವಿಫಲರಾಗಿದ್ದಾರೆ. ಆದ್ದರಿಂದ ತಕ್ಷಣವೇ ಕಾಂಕ್ರೀಟ್ ರಸ್ತೆಗಳನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.
ಒಕ್ಕೂಟದ ಪ್ರಮುಖರಾದ ವಸಂತ್ಕುಮಾರ್, ಅಶೋಕ್ ಕುಮಾರ್, ನರಸಿಂಹ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]