ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 4 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಐದು ತಿಂಗಳಿಂದ ವೇತನ ಪಾವತಿ (Delay Salary) ಮಾಡದಿರುವ ಹಿನ್ನೆಲೆ ರಾಜ್ಯ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಸಿಬ್ಬಂದಿ ಮನವಿ ಸಲ್ಲಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ಮನವಿ ಸಲ್ಲಿಸಿದ ಸಿಬ್ಬಂದಿ, ಸರಿಯಾಗಿ ವೇತನವಿಲ್ಲದೆ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಅಲವತ್ತುಕೊಂಡರು.
ವೇತನವಿಲ್ಲ, ಪ್ರಯಾಣ ಭತ್ಯೆಯು ಇಲ್ಲ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಹೊರಗುತ್ತಿಗೆ ಆಧಾರದಲ್ಲಿ ವಿವಿಧ ವಿಭಾಗದಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಕಳೆದ 5 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಬೇಕು. ಇದಕ್ಕೆ ಪ್ರಯಾಣ ಭತ್ಯೆ ನೀಡಲಾಗುತ್ತಿತ್ತು. ಅದರೆ ಜನವರಿಯಿಂದ ಪ್ರಯಾಣ ಭತ್ಯೆಯನ್ನು ಒದಗಿಸಿಲ್ಲ. ಆದ್ದರಿಂದ ಜೀವನ ಮತ್ತು ಕೆಲಸವನ್ನು ಸರಿಯಾಗಿ ನಿಭಾಯಿಸಲು ಕಷ್ಟವಾಗುತ್ತಿದೆ ಎಂದು ಸಿಬ್ಬಂದಿ ತಿಳಿಸಿದರು.
ಪ್ರತಿಭಟನೆ ಕೈಬಿಟ್ಟ ನೌಕರರು
ಜಿಲ್ಲಾ ಪಂಚಾಯಿತಿ ಸಿಇಒ ಅವರ ಕಚೇರಿ ಮುಂದೆ ಸಿಬ್ಬಂದಿ ಪ್ರತಿಭಟನೆ ನಡೆಸಲು ಹೊರಗುತ್ತಿಗೆ ನೌಕರರು ಮುಂದಾಗಿದ್ದರು. ಆದರೆ ಸಿಇಒ ಅವರಿಗೆ ಮನವಿ ಸಲ್ಲಿಸಿ ತಮ್ಮ ನೋವು ಹೇಳಿಕೊಳ್ಳುತ್ತಿದ್ದಂತೆ, ಸಂಬಂಧಿಸಿದ ಅಧಿಕಾರಿಗಳು, ಏಜೆನ್ಸಿಯೊಂದಿಗೆ ಸಿಇಒ ಮಾತನಾಡಿದರು.
‘6 ತಿಂಗಳಿಂದ ಸಂಬಳ ಆಗಿರಲಿಲ್ಲ. ಈ ಸಂಬಂಧ ಸಿಇಒ ಅವರಿಗೆ ಮನವಿ ಕೊಟ್ಟಿದ್ದೇವೆ. ಏಜನ್ಸಿಯಿಂದ ನಮಗೆ ವೇತನ ಪಾವತಿ ಮಾಡಲಾಗುತ್ತದೆ. ಏಜೆನ್ಸಿಯವರೆಗೆ ಸಿಇಒ ಮಾತನಾಡಿದರು. ಇನ್ನೆರಡು ದಿನದಲ್ಲಿ ಸಮಸ್ಯೆ ಪರಿಹಾರವಾಗಲಿದೆ. ಆದ್ದರಿಂದ ಪ್ರತಿಭಟನೆಯನ್ನು ನಡೆಸುವುದಿಲ್ಲʼ ಎಂದು ಸಂಘದ ಪ್ರಮುಖರು ತಿಳಿಸಿದರು.