ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಸರ್ಕಾರಿ ಅಧಿಕಾರಿಗಳು ಗಾಡಿಕೊಪ್ಪದ ಖಾಲಿ ಜಾಗದಲ್ಲಿ ಹಲವು ಕಡತಗಳಿಗೆ (Files) ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ದಿಢೀರ್ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ » ಸಿಗಂದೂರು ದೇಗುಲಕ್ಕೆ ಸಾವಿರ ಸಾವಿರ ಭಕ್ತರು, ಪಾರ್ಕಿಂಗ್ಗು ಸಿಗದ ಜಾಗ, ಸೇತುವೆ ಮೇಲೆ ಸೆಲ್ಫಿ ಸಂಭ್ರಮ
ವಿನೋಬನಗರ ಪೊಲೀಸ್ ಚೌಕಿ ಸಮೀಪದ ಸೂಡಾ ಕಾಂಪ್ಲೆಕ್ಸ್ನಲ್ಲಿರುವ ಕಾರ್ಮಿಕ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.

‘ಗಾಡಿಕೊಪ್ಪದಲ್ಲಿ ಕಡತ ಸುಟ್ಟರು’
ಕಾರ್ಮಿಕ ಇಲಾಖೆ ಅಧಿಕಾರಿಗಳು ಗಾಡಿಕೊಪ್ಪದಲ್ಲಿ ಇಂದು ಮಧ್ಯಾಹ್ನ ಹಲವು ಕಡತಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಕಡತಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಬೇಕು, ಸುಡಲು ಕಾರಣವೇನು ಎಂದು ತಿಳಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಅಧಿಕಾರಿಗಳು ಹೇಳೋದೇನು?
ಇನ್ನು, ಕಾರ್ಮಿಕ ಇಲಾಖೆ ಅಧಿಕಾರಿಗಳು ತಾವು ವೇಸ್ಟ್ ಪೇಪರ್ಗಳನ್ನು ಮಾತ್ರ ಸುಟ್ಟಿದ್ದೇವೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಜಿಲ್ಲಾ ಕಾರ್ಮಿಕ ಅಧಿಕಾರಿ ವೇಣುಗೋಪಾಲ್, ಕಚೇರಿಯಲ್ಲಿ ಇಲಿಗಳ ಕಾಟ ಹೆಚ್ಚಾಗಿದೆ. ಆದ್ದರಿಂದ ದಾಖಲೆಗಳನ್ನು ಸರಿಯಾಗಿ ಜೋಡಿಸಬೇಕಿತ್ತು. ಕಡತಗಳನ್ನು ಪರಿಶೀಲಿಸಿ ಜೋಡಿಸುವಾಗ ಒಂದಷ್ಟು ವೇಸ್ಟ್ ಪೇಪರ್ಗಳು ಸಿಕ್ಕಿದ್ದವು ಎಂದು ಸ್ಪಷ್ಟಪಡಿಸಿದರು.

ದಾಖಲೆಗಾಗಿ ಪಟ್ಟು ಹಿಡಿದು ಕುಳಿತಿದ್ದ ಪ್ರತಿಭಟನಾಕಾರರನ್ನು ವಿನೋಬನಗರ ಠಾಣೆ ಪೊಲೀಸರು ಸಮಾಧಾನಪಡಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





