ಶಿವಮೊಗ್ಗ: ಕೇಂದ್ರ ಸರ್ಕಾರ ಗೊಬ್ಬರದ (Fertilizer) ಬೆಲೆ ಹೆಚ್ಚಳ ಮಾಡಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್‌ನ ಗ್ರಾಮಾಂತರ ಘಟಕದ ವತಿಯಿಂದ ಶಿವಮೊಗ್ಗ ಕೃಷಿ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರ ವರ್ಷದಿಂದ ವರ್ಷಕ್ಕೆ ಗೊಬ್ಬರದ ಬೆಲೆ ಹೆಚ್ಚಳ ಮಾಡಿ, ರೈತರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ವರ್ಷ ಇಫ್ಕೊ ರಸಗೊಬ್ಬರ ಪ್ರತಿ ಚೀಲಕ್ಕೆ ₹1250 ಇತ್ತು. ಈ ವರ್ಷ ₹1650ಕ್ಕೆ ಏರಿಕೆಯಾಗಿದೆ. ಆರ್‌ಸಿಎಫ್ ಗೊಬ್ಬರ ₹1470 ರಿಂದ ₹1650ಕ್ಕೆ ಏರಿಕೆಯಾಗಿದೆ. ಹೀಗೆ ಪ್ರತಿ ಮಾದರಿಯ ಗೊಬ್ಬರದ ದರವು ಹೆಚ್ಚಳವಾಗಿದೆ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ಗ್ರಾಮಾಂತರ ಅಧ್ಯಕ್ಷ ಪ್ರವೀಣ್.ಎಸ್, ಪ್ರಮುಖರಾದ ಮಧುಸೂದನ್, ಚೇತನ್, ಬ್ಲಾಕ್ ಅಧ್ಯಕ್ಷ ಶಶಿಕುಮಾರ್.ಕೆ.ಆರ್, ಪ್ರವೀಣ್, ಪ್ರಧಾನ ಕಾರ್ಯದರ್ಶಿ ಶಿವು, ಅಬ್ದುಲ್ಲಾ, ಚರಣ್, ತೌಫಿಕ್, ಗಿರೀಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ » ‘ಬಡವರಿಗೆ ಹಂಚುವ ಮನೆಗಳಲ್ಲೂ ಮುಸ್ಲಿಮರಿಗೆ ಮೀಸಲಾತಿ’, ಕಾಂಗ್ರೆಸ್ ವಿರುದ್ಧ MLA ಸಿಡಿಮಿಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200