ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 DECEMBER 2020
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನಸಾಮಾನ್ಯರಿಗೆ ಹೊರೆಯಾಗುವಂತೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಮಾನವ ಸರಪಳಿ
ಶಿವಮೊಗ್ಗದ ಮಹಾವೀರ ಸರ್ಕಲ್‍ನಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ದಿನೇ ದಿನೇ ಅಡುಗೆ ಅನಿಲದ ಬೆಲೆ, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗುತ್ತಿದೆ. ಕೇಂದ್ರ ಸರ್ಕಾರ ಜನರ ಮೇಲೆ ಹೊರೆ ಹೊರಿಸುತ್ತಿದೆ ಎಂದು ಆರೋಪಿಸಿದರು.
ಸಿಲಿಂಡರ್ ಹೊತ್ತು ಮೆರವಣಿಗೆ
ಮಹಾವೀರ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಂಗ್ರೆಸ್ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಈ ವೇಳೆ ಕೆಲವು ಮಹಿಳೆಯರು ಸಿಲೆಂಡರ್ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸವಳಂಗ ರಸ್ತೆಯಲ್ಲಿ ಸಿಲಿಂಡರ್ ಉರುಳಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






