ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020
ಸಾಮೂಹಿಕ ಅತ್ಯಾಚಾರಕ್ಕೆ ಶಿವಮೊಗ್ಗದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ.
ALSO READ | ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಊಟ ಕೊಡಿಸುವ ನೆಪದಲ್ಲಿ ಸಾಗರ ರಸ್ತೆಗೆ ಕರೆದೊಯ್ದು ಕೃತ್ಯ
ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದವು.
ಯಾರೆಲ್ಲ ಪ್ರತಿಭಟಿಸಿದರು? ಆಗ್ರಹಗಳೇನು?
ಯುವ ಕಾಂಗ್ರೆಸ್ | ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಗಲ್ಲು ಶಿಕ್ಷೆಯನ್ನು ವಿಧಿಸಿ, ಇಂತಹ ಪ್ರಕರಣಗಳನ್ನು ತಪ್ಪಿಸಬೇಕು.
ಬಿಜೆಪಿ ಮಹಿಳಾ ಮೋರ್ಚಾ | ಈ ರೀತಿಯ ಘಟನೆಗಳಿಂದಾಗಿ ಮಹಿಳೆಯರಲ್ಲಿ ಅಸುರಕ್ಷತೆಯ ಭಾವ ಕಾಡುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
VIDEO REPORT
ಎಸ್‍ಡಿಪಿಐ | ಊಟ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ. ಇಡಿ ಸಮಾಜ ತಲೆ ತಗ್ಗಿಸುವಂತೆ ಮಾಡಿರುವ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ನಿಷೇಧಾಜ್ಞೆ ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲೇ ಊಟದ ವ್ಯವಸ್ಥೆ ಮಾಡಬೇಕಿತ್ತು. ತಪ್ಪಿತಸ್ಥ ಅಧಿಕಾರಿಗಳು, ಸಿಬ್ಬಂದಿಗಳನ್ನು ಅಮಾನತು ಮಾಡಬೇಕು.
ಎನ್‍ಎಸ್‍ಯುಐ | ಇನ್ಮುಂದೆ ಇಂತಹ ಪ್ರಕರಣಗಳು ಸಂಭವಿದಂತೆ ಎಚ್ಚರ ವಹಿಸಬೇಕು. ಅತ್ಯಾಚಾರಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಮತ್ತು ಗಲ್ಲು ಶಿಕ್ಷೆ ನೀಡಬೇಕು.
ಕಾಂಗ್ರೆಸ್ ಕಾರ್ಪೊರೇಟರ್‍ಗಳು | ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಿಷೇಧಾಜ್ಞೆಯಂತಹ ತುರ್ತು ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಊಟದ ವ್ಯವಸ್ಥೆ ಮಾಡಲು ಕಷ್ಟವೇಕೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422