ಶಿವಮೊಗ್ಗದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ತೀವ್ರ ಆಕ್ರೋಶ, ಗಲ್ಲು ಶಿಕ್ಷೆಗೆ ಆಗ್ರಹ

ಶಿವಮೊಗ್ಗ ಲೈವ್.ಕಾಂ |SHIMOGA NEWS | 7 DECEMBER 2020

ಸಾಮೂಹಿಕ ಅತ್ಯಾಚಾರಕ್ಕೆ ಶಿವಮೊಗ್ಗದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಅತ್ಯಾಚಾರಿಗಳನ್ನು ಗಲ್ಲಿಗೇರಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ.

ALSO READ | ಶಿವಮೊಗ್ಗದಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಊಟ ಕೊಡಿಸುವ ನೆಪದಲ್ಲಿ ಸಾಗರ ರಸ್ತೆಗೆ ಕರೆದೊಯ್ದು ಕೃತ್ಯ

ಜಿಲ್ಲಾಧಿಕಾರಿ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದವು.

Kalleshwara-Enterprises.webp

ಯಾರೆಲ್ಲ ಪ್ರತಿಭಟಿಸಿದರು? ಆಗ್ರಹಗಳೇನು?

ಯುವ ಕಾಂಗ್ರೆಸ್ | ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಗಲ್ಲು ಶಿಕ್ಷೆಯನ್ನು ವಿಧಿಸಿ, ಇಂತಹ  ಪ್ರಕರಣಗಳನ್ನು ತಪ್ಪಿಸಬೇಕು.

ಬಿಜೆಪಿ ಮಹಿಳಾ ಮೋರ್ಚಾ | ಈ ರೀತಿಯ ಘಟನೆಗಳಿಂದಾಗಿ ಮಹಿಳೆಯರಲ್ಲಿ ಅಸುರಕ್ಷತೆಯ ಭಾವ ಕಾಡುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.

VIDEO REPORT

ಎಸ್‍ಡಿಪಿಐ | ಊಟ ಕೊಡಿಸುವ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು, ಅತ್ಯಾಚಾರ ಎಸಗಿದ್ದಾರೆ. ಇಡಿ ಸಮಾಜ ತಲೆ ತಗ್ಗಿಸುವಂತೆ ಮಾಡಿರುವ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ನಿಷೇಧಾಜ್ಞೆ ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲೇ ಊಟದ ವ್ಯವಸ್ಥೆ ಮಾಡಬೇಕಿತ್ತು. ತಪ್ಪಿತಸ್ಥ ಅಧಿಕಾರಿಗಳು, ಸಿಬ್ಬಂದಿಗಳನ್ನು ಅಮಾನತು ಮಾಡಬೇಕು.

ಎನ್‍ಎಸ್‍ಯುಐ | ಇನ್ಮುಂದೆ ಇಂತಹ ಪ್ರಕರಣಗಳು ಸಂಭವಿದಂತೆ ಎಚ್ಚರ ವಹಿಸಬೇಕು. ಅತ್ಯಾಚಾರಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಮತ್ತು ಗಲ್ಲು ಶಿಕ್ಷೆ ನೀಡಬೇಕು.

ಕಾಂಗ್ರೆಸ್ ಕಾರ್ಪೊರೇಟರ್‍ಗಳು | ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ನಿಷೇಧಾಜ್ಞೆಯಂತಹ ತುರ್ತು ಸಂದರ್ಭದಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಊಟದ ವ್ಯವಸ್ಥೆ ಮಾಡಲು ಕಷ್ಟವೇಕೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment