ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಆಗಸ್ಟ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕಳೆದ ಎರಡು ದಿನಗಳ ಹಿಂದೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಪಾನಮತ್ತ ನಾಲ್ಕೈದು ಯುವಕರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸೂಕ್ತ ಭದ್ರತೆ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಕೂಡಲೇ ಗೃಹ ಸಚಿವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಆರ್. ಮಂಜು, ಪ್ರಮುಖರಾದ ಎಸ್. ಮಧು, ವಿಜಯಕುಮಾರ್, ಶೈಲೇಶ್ ಮುಂತಾದವರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200