ಶಿವಮೊಗ್ಗದಲ್ಲಿ ಗಾಂಜಾ, ಡ್ರಗ್ಸ್ ಹಾವಳಿ ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 27 ಜುಲೈ 2022

ಜಿಲ್ಲೆಯಲ್ಲಿ ಗಾಂಜಾ, ಡ್ರಗ್ಸ್ (DRUGS) ಹಾವಳಿ ನಿಯಂತ್ರಣ, ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ವತಿಯಿಂದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

Shimoga Nanjappa Hospital

ಗೃಹ ಸಚಿವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ದಿನೇ ದಿನೇ ಗಾಂಜಾ, ಡ್ರಗ್ಸ್, ಮಾದಕ ವಸ್ತುಗಳ ಕುರಿತು ಪ್ರಕರಣಗಳು ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಗಾಂಜಾ, ಮಾದಕ ವಸ್ತುಗಳ ಮಾರಾಟ ನಿರಂತರವಾಗಿ ಸಾಗಿದೆ. ಗಾಂಜಾ, ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ವಿಫಲರಾಗಿರುವ ಹಾಗೂ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಲು ವಿಫಲರಾಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಬಹುತೇಕ ಕಾಲೇಜಿನ ವಿದ್ಯಾರ್ಥಿಗಳು ಗಾಂಜಾ, ಮಾದಕ ವಸ್ತುಗಳ (DRUGS) ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಶಾಲಾ-ಕಾಲೇಜುಗಳ ಆವರಣದಲ್ಲಿ ಗಾಂಜಾ, ಮಾದಕ ವಸ್ತುಗಳ ಬಳಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಪ್ರತಿಷ್ಠಿತ ಕಾಲೇಜಿನ ಎದುರಿನಲ್ಲಿಯೇ ವಿದ್ಯಾರ್ಥಿಗಳು ನಶೆಯಲ್ಲಿ ಬಿದ್ದು ಒದ್ದಾಡುತ್ತಿರುವುದು ವೈರಲ್ ಆಗಿದೆ. ಇದು ಅತ್ಯಂತ ಬೇಸರದ ಸಂಗತಿ. ಗಾಂಜಾ, ಡ್ರಗ್ಸ್ ಸೇರಿದಂತೆ ಮಾದಕ ವಸ್ತುಗಳ ಮಾರಾಟ ತಡೆಗಟ್ಟಲು ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗಾಂಜಾ ಮಾರಾಟ ಹಾಗೂ ಬಳಕೆ ಮಾಡುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಂಡು ಶಿಕ್ಷೆಗೆ ಒಳಪಡಿಸಬೇಕು. ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸುವ ಕೆಲಸವನ್ನು ರಾಜ್ಯ ಸರ್ಕಾರ ಕ್ರಮ ವಹಿಸಬೇಕು. ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಮಾರಾಟ, ಮಾದಕ ವಸ್ತುಗಳ ಮಾರಾಟ ನಿಯಂತ್ರಿಸುವಲ್ಲಿ ಹಾಗೂ ಗೃಹ ಇಲಾಖೆ ನಿರ್ವಹಿಸುವಲ್ಲಿ ವಿಫಲರಾಗಿರುವ ಸಚಿವ ಆರಗ ಜ್ಞಾನೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ನಗರ ಅಧ್ಯಕ್ಷ ಚರಣ್, ಹರ್ಷಿತ್, ಎಸ್.ಎಸ್.ವಿಜಯ್ಕುಮಾರ್, ವಿಶಾಲ್, ಕಿರಣ್, ಸಚಿನ್, ಸೋನು, ಪ್ರದೀಪ್, ಗಗನ್, ಅಭಿ, ಪವನ್, ಮುರುಳಿ, ಮನು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ದಿಢೀರ್ ದಾಳಿ, 646 ಕೇಸ್’ನಲ್ಲಿ ದಂಡ ವಿಧಿಸಿದ ಪೊಲೀಸ್

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 27, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment