SHIMOGA NEWS, 22 OCTOBER 2024 : ಗೌರಿ ಲಂಕೇಶ್ ಹಂತಕರಿಗೆ ಸನ್ಮಾನ ಮತ್ತು ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಮತ್ತು ಗೌರಿ ಬಳಗದ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳ ಪ್ರಮುಖರು, ಗೌರಿ ಹಂತಕರಿಗೆ ಸನ್ಮಾನ ಮಾಡಿದವರನ್ನು ಶಿಕ್ಷೆಗೊಳಪಡಿಸಬೇಕು. ಅಲ್ಲದೆ ಗೌರಿ ಹಂತಕರ ಜಾಮೀನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
![]() |
ಯಾರೆಲ್ಲ ಏನೆಲ್ಲ ಹೇಳಿದರು?
ಗೌರಿ ಹಂತಕರಿಗೆ ಶಿಕ್ಷೆಯಾಗಬೇಕು ಎಂದು ದೇಶ, ವಿದೇಶದಲ್ಲಿ ಆಗ್ರಹ ಕೇಳಿ ಬಂದಿತ್ತು. ಬಂಧಿತರ ಪೈಕಿ ಇಬ್ಬರು ಜಾಮೀನಿನ ಮೇಲೆ ಬಿಡುಗಡೆ ಆಗಿದ್ದಾರೆ. ಈ ಪೈಕಿ ಒಬ್ಬನಿಗೆ ಸನ್ಮಾನ ನಡೆದಿದೆ. ಮತ್ತೊಬ್ಬನಿಗೆ ಚುನಾವಣೆ ಉಸ್ತುವಾರಿ ವಹಿಸಲಾಗಿದೆ. ಕರ್ನಾಟಕದಲ್ಲಿ ವೈಚಾರಿಕ ಭಿನ್ನಾಭಿಪ್ರಾಯ ಇತ್ತು. ಆದರೆ ಈಗ ಒಬ್ಬನಿಗೆ ಸನ್ಮಾನ ಮಾಡಿ ಮತ್ತಷ್ಟು ಕೊಲೆಗಳಿಗೆ ಪ್ರಚೋದನೆ ನೀಡಿದಂತಾಗಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಕೆ.ಎಲ್.ಅಶೋಕ್, ಪ್ರಗತಿಪರ ಚಿಂತಕ
ಸಂಚು ರೂಪಿಸಿ ಗೌರಿಯ ಹತ್ಯೆ ಮಾಡಲಾಯಿತು. ಕೊಲೆ ಆರೋಪಿಗಳಿಗೆ ಸನ್ಮಾನ ಮಾಡುವುದು ಸರಿಯಲ್ಲ. ಪ್ರಪಂಚದಲ್ಲಿ ಎಲ್ಲೂ ನಡೆಯದ ಕೃತ್ಯವಿದು. ಗೌರಿಯನ್ನು ಕೊಂದಿರಬಹುದು. ಆದರೆ ಆಕೆಯ ಧ್ವನಿ ಅಡಗಿಸಲು ಸಾಧ್ಯವಿಲ್ಲ.
ಚಂದ್ರೇಗೌಡ, ಚಿಂತಕ
ನಾವು ಅಹಿಂಸೆ, ಗಾಂಧಿ, ಗೌರಿಯನ್ನು ಪ್ರೀತಿಸುತ್ತೇವೆ. ನಮ್ಮ ಹೋರಾಟವನ್ನು ಸರ್ಕಾರ ಗಮನಿಸಬೇಕು. ತಪ್ಪಿತಸ್ಥರಿಗೆ ಶಿಕ್ಷ ಆಗಬೇಕು
ಸಾ.ಉಷಾ, ಸಾಹಿತಿ
ಆರೋಪಿಗಳು ನಿರ್ದೋಷಿ ಅಂತಾ ಬಿಡುಗಡೆ ಆಗಿದ್ದಲ್ಲ. ಐದಾರು ವರ್ಷ ಅವರಿಗೆ ಜಾಮೀನು ದೊರೆತಿರಲಿಲ್ಲ. ಮುಖ್ಯ ಸಾಕ್ಷಿಗಳ ವಿಚಾರಣೆ ಮುಗಿದ ಹಿನ್ನಲೆ ನ್ಯಾಯಾಲಯ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ಆದರೆ ಇಂತಹವರಿಗೆ ಸನ್ಮಾನ ಮಾಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು. ಸಿದ್ದರಾಮಯ್ಯ ಸರ್ಕಾರ ತಕ್ಷಣ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಕೆ.ಪಿ.ಶ್ರೀಪಾಲ್, ವಕೀಲರು
ಪ್ರಮುಖರಾದ ಶೃಂಗೇಶ್, ಟೆಲೆಕ್ಸ್ ರವಿಕುಮಾರ್, ಶಿವಕುಮಾರ್, ಅನಿಲ್, ಹಾಲೇಶಪ್ಪ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ » ಶಿವಮೊಗ್ಗದ ಬೈಕ್ ಶೋ ರೂಂನಲ್ಲಿ ಬೆಂಕಿ, ಅಗ್ನಿಶಾಮಕ ಸಿಬ್ಬಂದಿ ದೌಡು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200