ಶಿವಮೊಗ್ಗ ಲೈವ್.ಕಾಂ | SHIMOGA NEWS | 07 ಅಕ್ಟೋಬರ್ 2021
ಯಾವುದೇ ಚರ್ಚೆಯಿಲ್ಲದೆ ಏಕಾಏಕಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಕೂಡಲೆ ಇದನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ NSUI ಕಾರ್ಯಕರ್ತರು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ಅವರಿಗೆ ಕಪ್ಪು ಬಾವುಟ ತೋರಿಸಿದರು.
![]() |
ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಚಿವ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ಅವರು ಆಗಮಿಸಿದ್ದರು. ಈ ವೇಳೆ NSUI ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ಮಾರ್ಗಗಳು ಸರಿಯಿಲ್ಲ. ದೇಶದ ಭವಿಷ್ಯ ರೂಪಿಸಬೇಕಾದ ಶಿಕ್ಷಣ ನೀತಿ ಬಗ್ಗೆ ಸಂಸತ್‌ನಲ್ಲಿ ಸಮಗ್ರ ಚರ್ಚೆ ನಡೆದಿಲ್ಲ. ಕರೊನಾ ಸಂದರ್ಭದಲ್ಲಿ ಏಕಾಏಕಿ ಹೊಸ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಶಿಕ್ಷಣ ನೀತಿಯಲ್ಲಿ ಕಡ್ಡಾಯ ಮತ್ತು ಸಮಾನ ಶಿಕ್ಷಣದ ಬಗ್ಗೆ ಯಾವುದೇ ಸ್ಪಷ್ಟತೆಯಿಲ್ಲ. ಇದರಿಂದ ಶಿಕ್ಷಣ ವ್ಯವಸ್ಥೆಯಿಂದ ದೂರಾಗುವವರ ಸಂಖ್ಯೆ ಹೆಚ್ಚಾಗಬಹುದು. ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ ಹೆಚ್ಚುವ ಆತಂಕವಿದೆ. ವಿದ್ಯಾರ್ಥಿ ವೇತನದ ಬಗ್ಗೆ ನಿಖರತೆಯಲ್ಲ ಎಂದು ದೂರಿದರು.
ಹೊಸ ಶಿಕ್ಷಣ ನೀತಿಯನ್ನು ಕೈಬಿಡದಿದ್ದರೆ ಎನ್‌ಎಸ್‌ಯುಐನಿಂದ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು. ಉನ್ನತ ಶಿಕ್ಷಣ ಸಚಿವರ ಕಾರನ್ನು ಅಡ್ಡಗಟ್ಟಿ ಪ್ರತಿಭಟಿಸಲು ಮುಂದಾದ ಎನ್‌ಎಸ್‌ಯುಐ ಕಾರ್ಯಕರ್ತರನ್ನು ತಡೆಯಲು ಪೊಲೀಸರ ಹರಸಾಹಸ ಪಡಬೇಕಾಯಿತು.
ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ, ಜಿಲ್ಲಾ ಕಾರ್ಯಾಧ್ಯಕ್ಷ ರವಿ, ನಗರಾಧ್ಯಕ್ಷ ವಿಜಯ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ದಕ್ಷಿಣ ಬ್ಲಾಕ್ ಅಧ್ಯಕ್ಷ ವಿನಯ್, ಉತ್ತರ ಬ್ಲಾಕ್ ಅಧ್ಯಕ್ಷ ಗಿರೀ ಪ್ರಮುಖರಾದ ಭರತ್, ಸಂದೀಪ್, ಅಬ್ದುಲ್ಲಾ ಇತರರಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200